ಏಮ್ಸ್‌ಗೆ ಯಾಕೆ ಹೋಗಿಲ್ಲ? ಖಾಸಗಿ ಆಸ್ಪತ್ರೆಯಲ್ಲಿರುವ ಅಮಿತ್ ಶಾಗೆ ತಿವಿದ ತರೂರ್!
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ| ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರವ ಅಮಿತ್ ಶಾ| ಸರ್ಕಾರಿ ಆಸ್ಪತ್ರೆಯಲ್ಲಿ ಯಾಕೆ ಚಿಕಿತ್ಸೆ ಪಡೆಯುತ್ತಿಲ್ಲ? ತರೂರ್ ಪ್ರಶ್ನೆ
ನವದೆಹಲಿ(ಆ.03): ದೇಶದಲ್ಲಿ ಕೊರೋನಾತಂಕ ಹೆಚ್ಚುತ್ತಿದ್ದು, ಅತ್ತ ಕೇಂದ್ರ ಗೃಹ ಸಚಿವ ಹಾಘೂ ಬಿಜೆಪಿ ನಾಐಕ ಅಮಿತ್ ಶಾಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೀಗ ಇದರ ಬೆನ್ನಲ್ಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರವ ಅಮಿತ್ ಶಾಗೆ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ತರೂರ್ ಭಾನುವಾರ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಅಮಿತ್ ಶಾ ಖಾಸಗಿ ಆಸ್ಪತ್ರೆಗೆ ದಾಖಲಾದರು? ಗೃಹ ಸಚಿವರು ಚಿಕಿತ್ಸೆಗೆ ದೆಹಲಿಯ ಏಮ್ಸ್ ಆಸ್ಪತ್ರೆಯನ್ನು ಯಾಕೆ ಆಯ್ಕೆ ಮಾಡಲಿಲ್ಲ ಎಂದು ಅಚ್ಚರಿಯಾಗುತ್ತಿದೆ ಎಂದು ಬರೆದಿದ್ದಾರೆ. ಅಲ್ಲದೇ ಸರ್ಕಾರಿ ಸಂಸ್ಥೆಗಳಲ್ಲಿ ಪ್ರಭಾವಿ ವ್ಯಕ್ತಿಗಳು ಚಿಕಿತ್ಸೆ ಪಡೆಯುವುದರಿಂದ ಸಾರ್ವಜನಿಕರಲ್ಲಿ ನನಂಬಿಕೆ ಹುಟ್ಟುತ್ತದೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ವಕ್ಕರಿಸಿದ ಕೊರೋನಾ
ಇನ್ನು ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇನ್ನು 55 ವರ್ಷದ ಅಮಿತ್ ಶಾ ಆರೋಗ್ಯ ಚೆನ್ನಾಗಿದೆ ಆದರೆ ವೈದ್ಯರ ಸಲಹೆ ಮೇರೆಗೆ ತಾನು ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಹೇಳಿದ್ದಾರೆ.