‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ’!
ವಿವಾದದ ಕಿಡಿ ಹೊತ್ತಿಸಿದ ರಾಹುಲ್ ಗಾಂಧಿ ‘ರೇಪ್ ಇನ್ ಇಂಡಿಯಾ’ ಹೇಳಿಕೆ| ರಾಹುಲ್ ಗಾಂಧಿ ಹೇಳಿಕೆಗೆ ಕೆಂಡಾಮಂಡಲವಾಗಿರುವ ಬಿಜೆಪಿ| ರಾಹುಲ್ ಗಾಂಧಿ ಕ್ಷಮೆಗೆ ಪಟ್ಟು ಹಿಡಿದಿರುವ ಬಿಜೆಪಿ| ‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ..’| ಬಿಜೆಪಿಗೆ ಪ್ರತ್ಯುತ್ತರ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ|
ನವದೆಹಲಿ(ಡಿ.14): ‘ರೇಪ್ ಇನ್ ಇಂಡಿಯಾ’ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಾವು ಸತ್ಯವನ್ನೇ ಹೇಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ.
"
ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು ಹಾಗೂ ಈ ಕುರಿತು ಪ್ರಧಾನಿ ಮೌನವನ್ನು ಪ್ರತಿಭಟಿಸಲು ನಾನು ಅಂತಹ ಪದ ಬಳಸಬೇಕಾಯಿತು ಎಂದು ರಾಹುಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ರೇಪ್ ಇನ್ ಇಂಡಿಯಾ: ರಾಹುಲ್ ಕ್ಷಮೆಗೆ ಸದನದ ಒತ್ತಾಯ!
‘ಇಟ್ಟ ಹೆಜ್ಜೆಯನ್ನು ವಾಪಸ್ ಪಡೆಯಲು, ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ ರಾಹುಲ್ ಗಾಂಧಿ’..ಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ.
‘ಅತ್ಯಾಚಾರ ಪ್ರಕರಣಗಳ ವಿರುದ್ಧ ಧ್ವನಿ ಎತ್ತಬಾರದು, ಈ ಕುರಿತು ಸರ್ಕಾರ ಮುಖ್ಯಸ್ಥ ಪ್ರಧಾನಿ ಅವರನ್ನು ಪ್ರಶ್ನಿಸಬಾರದು ಎನ್ನುವುದು ಅಪರಾಧವಾದರೆ ನಾನು ಈ ಅಪರಾಧವನ್ನು ಪದೇ ಪದೇ ಮಾಡುತ್ತೇನೆ’ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.
ದೇಶದ ಅರ್ಥ ವ್ಯವಸ್ಥೆ ಹದಗೆಟ್ಟಿದ್ದು, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹ್ಚೆುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸತ್ಯವನ್ನು ಮಾತನಾಡಬಾರದು ಎಂದರೆ ಹೇಗೆ ಎಂದು ರಾಹುಲ್ ಪ್ರಶ್ನಿಸಿದರು.
ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ!
ಜಾರ್ಖಂಡ್ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಭಾರತ ‘ರೇಪ್ ಇನ್ ಇಂಡಿಯಾ’ ಆಗಿ ಬದಲಾಗುತ್ತಿದೆ ಎಂದು ರಾಹುಲ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ರಾಹುಲ್ ದೇಶದ ಕ್ಷಮೆ ಕೋರಬೇಕೆಂದು ಲೋಕಸಭೆಯಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರಲ್ಲದೇ, ಕೇಂದ್ರ ಸಚಿವೆ ಸ್ಮೃತಿ ಇರಾನಿ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನೂ ಸಲ್ಲಿಸಿತ್ತು.
ಡಿಸೆಂಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: