ಭಾವನಗರ[ಡಿ.09]: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಒಂದು ವರ್ಷದಿಂದ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದ್ದು, ಈ ಕೃತ್ಯಕ್ಕೆ ಸಂತ್ರಸ್ತೆ ತಾಯಿಯೇ ನೆರವಾಗಿದ್ದಳು ಎಂಬ ಆಘಾತಕಾರಿ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಭುಟಿಯಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಈ ಬಗ್ಗೆ ಸಂತ್ರಸ್ತೆಯ ತಂದೆ ದೂರು ನೀಡಿದ್ದು, ತನ್ನ ಮಗಳ ಮೇಲೆ ಒಂದು ವರ್ಷದಿಂದ ಅತ್ಯಾಚಾರ ನಡೆಸಲಾಗುತ್ತಿದೆ. ಇದಕ್ಕೆ ತನ್ನ ಹೆಂಡತಿಯ ಸಹಕಾರವಿದೆ ಎಂದು ದೂರಿನಲ್ಲಿ ತಿಳಿಸಿದ್ದಾನೆ.

ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತಾಯಿಯು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಜಾಲ ಬೀಸಲಾಗಿದೆ.