ಐಐಟಿ ಹೈದರಾಬಾದ್ ಮತ್ತು ಸಿಂಪ್ಲಿಫೋರ್ಜ್ ಕ್ರಿಯೇಷನ್ಸ್ ಸಹಯೋಗದೊಂದಿಗೆ ಮಿಲಿಟರಿ ಬಳಕೆಗಾಗಿ ವಿಶ್ವದ ಮೊದಲ 3ಡಿ-ಮುದ್ರಿತ ಬಂಕರ್ ಅನ್ನು ಲೇಹ್‌ನಲ್ಲಿ ನಿರ್ಮಿಸಲಾಗಿದೆ. ಇದರ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ.

ತೆಲೇಹ್‌: ಹೈದರಾಬಾದ್ ಮೂಲದ ಸಿಂಪ್ಲಿಫೋರ್ಜ್ ಕ್ರಿಯೇಷನ್ಸ್ ಎಂಬ ಸ್ಟಾರ್ಟ್ಅಪ್ ಕಂಪನಿ ಐಐಟಿ ಹೈದರಾಬಾದ್‌ನ ಸಹಯೋಗದೊಂದಿಗೆ ಮಿಲಿಟರಿ ಬಳಕೆಗಾಗಿ ವಿಶ್ವದ ಮೊದಲ 3ಡಿ-ಮುದ್ರಿತ ಬಂಕರ್ ಅನ್ನು ನಿರ್ಮಿಸಲಾಗಿದೆ. ಐಐಟಿ ಹೈದರಾಬಾದ್‌ನ ಪ್ರಾಧ್ಯಾಪಕ ಕೆ. ವಿ. ಎಲ್. ಸುಬ್ರಮಣಿಯಂ ಮಾರ್ಗದರ್ಶನ ಮಾಡಿದ್ದು, ಲೇಹ್‌ನಲ್ಲಿ ಇದನ್ನು ನಿರ್ಮಿಸಲಾಗಿದೆ.

ಏನಿದು 3ಡಿ-ಮುದ್ರಿತ ಬಂಕರ್?
ಲಡಾಖ್ ವಲಯದಲ್ಲಿ ಚೀನಾ ಗಡಿಯಲ್ಲಿರುವ ಸೈನಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸುವುದಕ್ಕೋಸ್ಕರ ಈ ವಿಶೇಷ ಬಂಕರ್ ನಿರ್ಮಿಸಲಾಗಿದೆ. 3ಡಿ-ಮುದ್ರಿತ ಬಂಕರ್‌ಗಳ ಪ್ರಯೋಜನವೆಂದರೆ, ಇವು ಹೆಚ್ಚು ಬಾಳಿಕೆ ಬರುತ್ತವೆ ಮತ್ತು ಕಡಿಮೆ ತೂಕ ಹೊಂದಿರುತ್ತವೆ. ಇವು ತುಂಬಾ ಬಲಿಷ್ಠವಾಗಿದ್ದು, ಟಿ-90 ಟ್ಯಾಂಕ್‌ನ ನೇರ ಹೊಡೆತವನ್ನು ಸಹ ತಡೆದುಕೊಳ್ಳಬಲ್ಲವು. ಸೈನ್ಯದ ಅವಶ್ಯಕತೆಗಳನ್ನು ಅವಲಂಬಿಸಿ ಇವುಗಳನ್ನು ಬಹಳ ಬೇಗನೆ ತಯಾರಿಸಬಹುದಾಗಿದೆ.

'ನಾವು ಹಿಂದೂಗಳೇ ವಿನಾ ಹಿಂದಿಗಳಲ್ಲ'; ಹಿಂದಿ ಹೇರಿಕೆ ವಿರುದ್ಧ ಮಹಾರಾಷ್ಟ್ರದಲ್ಲೂ ಹೊತ್ತಿದ ಕಿಡಿ!

ಏ.21, 22ಕ್ಕೆ ರಾಹುಲ್ ಗಾಂಧಿ ಅಮೆರಿಕ ಪ್ರವಾಸ

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಏ.21, 22ರಂದು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅಲ್ಲಿನ ಬ್ರೌನ್ ವಿವಿಯಲ್ಲಿ ಉಪನ್ಯಾಸ ನೀಡಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಅದಕ್ಕೂ ಮೊದಲು ಅನಿವಾಸಿ ಭಾರತೀಯರು, ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಪದಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ.ರಾಹುಲ್‌ ಈ ಹಿಂದೆಯೂ ವಿದೇಶಗಳ ಹಲವು ವಿವಿಗಳಲ್ಲಿ ಉಪನ್ಯಾಸ ನೀಡಿದ್ದರು. ಭಾರತದ ಪ್ರಜಾಪ್ರಭುತ್ವದ ಕುರಿತ ಅವರ ಸಂವಾದ ಸಾಕಷ್ಟು ವಿವಾದ ಸೃಷ್ಟಿಸಿದ್ದವು. ಅವರು ವಿದೇಶಗಳಲ್ಲಿ ಭಾರತದ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಈ ಬಾರಿಯ ಅಮೆರಿಕ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.

ನಿಮ್ಮ ರಕ್ತನಾಳದಲ್ಲಿ ವಿದೇಶ ಇರೋಕೆ ಹೇಗೆ ಸಾಧ್ಯ? ಪಾಕ್ ಮುಖ್ಯಸ್ಥನ ಕಾಶ್ಮೀರ ಹೇಳಿಕೆಗೆ ಭಾರತ ತಿರುಗೇಟು

ನವದೆಹಲಿ: ಜಮ್ಮು ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥರ ಹೇಳಿಕೆಗೆ ಭಾರತ ಈಗ ಖಡಕ್ ಉತ್ತರ ನೀಡಿದೆ. ಜಮ್ಮು ಕಾಶ್ಮೀರ ನಮ್ಮ ಕತ್ತಿನ ರಕ್ತನಾಳವಾಗಿದೆ. ಹಾಗೂ ಅದು ಮುಂದೆಯೂ ಅದೇ ಆಗಿರುತ್ತದೆ ಎಂದು ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಭಾರತದ ವಿದೇಶಾಂಗ ಸಚಿವಾಲಯ ನಿಮ್ಮ ಕತ್ತಿನ ರಕ್ತನಾಳದಲ್ಲಿ ವಿದೇಶ ಇರಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್‌, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಹಾಗೂ ಅದು ಭಾರತದ ಕೇಂದ್ರಾಡಳಿತ ಪ್ರದೇಶ, ಪಾಕಿಸ್ತಾನದೊಂದಿಗಿನ ಜಮ್ಮುಕಾಶ್ಮೀರದ ಏಕೈಕ ಸಂಬಂಧವೆಂದರೆ ಆ ಪ್ರದೇಶವನ್ನು ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವುದಾಗಿದೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥರ ಹೇಳಿಕೆಗೆ ಜೈಸ್ವಾಲ್ ತಿರುಗೇಟು ನೀಡಿದ್ದಾರೆ. ಇದೇ ವೇಳೆ ಅವರ 'ಎರಡು ರಾಷ್ಟ್ರ' ಹೇಳಿಕೆಗೂ ಪ್ರತಿಕ್ರಿಯಿಸಿದ ಜೈಸ್ವಾಲ್, ತಾನು ಅಕ್ರಮಿಸಿಕೊಂಡ ಕಾಶ್ಮೀರದ ಪ್ರದೇಶವನ್ನು ವಾಪಸ್ ಹಿಂದಿರುಗಿಸುವುದೊಂದು ಮಾತ್ರ ಪಾಕಿಸ್ತಾನದ ಜೊತೆ ಕಾಶ್ಮೀರಕ್ಕಿರುವ ಸಂಬಂಧವಾಗಿದೆ ಎಂದಿದ್ದಾರೆ. 

ವಿದೇಶದಲ್ಲಿ ಪಾಕಿಸ್ತಾನ ಪ್ರಜೆಗಳ ಸಮಾವೇಶದಲ್ಲಿ ಮಾತನಾಡಿದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌, ಪಾಕಿಸ್ತಾನದ ಸೃಷ್ಟಿಗೆ ಆಧಾರವಾಗಿರುವ ದ್ವಿರಾಷ್ಟ್ರ ಸಿದ್ಧಾಂತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಲ್ಲದೇ ಮುಸ್ಲಿಮರು ಜೀವನದ ಎಲ್ಲಾ ವಿಚಾರಗಳಲ್ಲಿ ಹಿಂದೂಗಳಿಗಿಂತ ಭಿನ್ನರು ಎಂದು ಹೇಳಿಕೆ ನೀಡಿದ್ದರು. ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು, ನಾವು ಒಂದೇ ರಾಷ್ಟ್ರವಲ್ಲ. ಅದಕ್ಕಾಗಿಯೇ ನಮ್ಮ ಪೂರ್ವಜರು ಈ ದೇಶವನ್ನು ರಚಿಸಲು ಹೋರಾಡಿದರು. ನಾವು ಹಿಂದೂಗಳಿಗಿಂತ ತುಂಬಾ ವಿಭಿನ್ನರು, ನಮ್ಮ ಪೂರ್ವಜರು ಮತ್ತು ನಾವು ಈ ದೇಶದ ನಿರ್ಮಾಣಕ್ಕೆ ಸಾಕಷ್ಟು ತ್ಯಾಗ ಮಾಡಿದ್ದೇವೆ. ಅದನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ ಎಂದಿದ್ದರು.