ನವದೆಹಲಿ (ಡಿ. 04): ಪ್ರಧಾನಿ ನರೇಂದ್ರ ಮೋದಿ 2019ರಲ್ಲಿ ಭಾರತದಲ್ಲಿ ಅಂತರ್ಜಾಲ ತಾಣಗಳಲ್ಲಿ ಅತಿ ಹೆಚ್ಚು ಶೋಧಿಸಲ್ಪಟ್ಟವ್ಯಕ್ತಿ ಎನಿಸಿದ್ದು, ಸತತ ಎರಡನೇ ವರ್ಷವೂ ಈ ಪಟ್ಟಗಿಟ್ಟಿಸಿಕೊಂಡಿದ್ದಾರೆ ಎಂದು ಯಾಹೂ ಇಂಡಿಯಾದ ಅಧ್ಯಯನವೊಂದು ತಿಳಿಸಿದೆ. ಕ್ರಿಕೆಟಿಗ ಎಂ.ಎಸ್‌. ಧೋನಿ, ನಟಿ ಪ್ರಿಯಾಂಕಾ ಚೋಪ್ರಾ ನಂತರದ ಸ್ಥಾನದಲ್ಲಿದ್ದಾರೆ.

ಅನಾರೋಗ್ಯದಿಂದ ನಿಧನರಾದ ಬಿಜೆಪಿ ಹಿರಿಯ ನಾಯಕ ಅರುಣ್‌ ಜೇಟ್ಲಿ, ಸಾಹಿತಿ ಗಿರೀಶ್‌ ಕಾರ್ನಾಡ್‌, ಬಾಲಾಕೋಟ್‌ ದಾಳಿ ಮರುದಿನ ಪಾಕಿಸ್ತಾನದಲ್ಲಿ ಸಿಲುಕಿ ಬಳಿಕ ಬಿಡುಗಡೆಯಾಗಿ ಬಂದ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ತಮಾನ್‌ ಅವರು ಅಗ್ರ 10 ರಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ರಾಜಕಾರಣಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎರಡನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಸಂಸತ್ತಲ್ಲಿ ತುಳುಭಾಷೆ ಪರ ಧ್ವನಿಯೆತ್ತಿದ ಕೇರಳ ಸಂಸದ! ಕರಾವಳಿ ಎಂಪಿಗಳಿಗೆ ನೆಟ್ಟಿಗರ ಛೀಮಾರಿ!

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅತಿ ಹೆಚ್ಚು ಶೋಧಿಸಲ್ಪಟ್ಟಪುರುಷ ಸೆಲೆಬ್ರಿಟಿ ಎನಿಸಿಕೊಂಡಿದ್ದು, ಅಮಿತಾಭ್‌ ಬಚ್ಚನ್‌ ಹಾಗೂ ಅಕ್ಷಯ್‌ ಕುಮಾರ್‌ ನಂತರದ ಸ್ಥಾನದಲ್ಲಿದ್ದಾರೆ.

ಕೈಗಾರಿಕೋದ್ಯಮಿಗಳ ಪೈಕಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ, 2019ರಲ್ಲಿ ಸುದ್ದಿಯಲ್ಲಿರುವ ಅಗ್ರ ಉದ್ಯಮಿ ಎನಿಸಿಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಅದಾನಿ ಗ್ರೂಪ್‌ನ ಗೌತಮ್‌ ಅದಾನಿ ಸ್ಥಾನ ಪಡೆದಿದ್ದಾರೆ.

ಫೇಸ್‌ಬುಕ್‌ನಲ್ಲಿ ಅಪರಿಚತರೊಂದಿಗೆ ಚಾಟ್ ಮಾಡೋ ಮುನ್ನ ಈ ಸುದ್ದಿ ಓದಿ!

ಕ್ರಿಡಾಪಟುಗಳ ಪೈಕಿ ಕ್ರಿಕೆಟಿಗ ಎಂ.ಎಸ್‌. ಧೋನಿ ಅತಿ ಹೆಚ್ಚು ಶೋಧಿಸಲ್ಪಟ್ಟವ್ಯಕ್ತಿಯಾಗಿದ್ದಾರೆ. ನಂತರದಲ್ಲಿ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಇದ್ದಾರೆ.