Asianet Suvarna News Asianet Suvarna News

ಯೂಟ್ಯೂಬ್‌ನಲ್ಲಿ ಲಕ್ಷಗಟ್ಟಲೆ ಸಂಪಾದಿಸ್ತಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

  • ಲಾಕ್‌ಡೌನ್‌ನಲ್ಲಿ ಮನೆಯಲ್ಲೇ ಕುಳಿತು ಸಂಪಾದನೆ ಮಾಡಿದ ಕೇಂದ್ರ ಸಚಿವ
  • ಯೂಟ್ಯೂಬ್ ಚಾನೆಲ್ ತಂದುಟ್ಟಿದ್ದು ಲಕ್ಷ ಲಕ್ಷ ಆದಾಯ
YouTube pays me Rs 4 lakh per month says Union Minister Nitin Gadkari dpl
Author
Bangalore, First Published Sep 17, 2021, 11:01 AM IST

ಮುಂಬೈ (ಸೆ.17): ಕೇಂದ್ರ ಸಚಿವ ನಿತಿನಗ ಗಡ್ಕರಿ ಅವರು ತಮ್ಮ ಲಾಕ್‌ಡೌನ್ ಅನುಭವಗಳ ಬಗ್ಗೆ ಮಾತನಾಡಿದ್ದಾರೆ. ಕೊರೋನಾ ಕಾಲದಲ್ಲಿ ಲಾಕ್‌ಡೌನ್ ಆದಾಗ ತಾವು ಮನೆಯಲ್ಲೇ ತಮ್ಮ ಸಮಯವನ್ನು ಕಳೆದಿದ್ದು ಹೇಗೆ ಎಂಬುದನ್ನು ತಿಳಿಸಿದ್ದಾರೆ.

ಹರಿಯಾಣದಲ್ಲಿ ಇವೆಂಟ್ ಒಂದರಲ್ಲಿ ಮಾತನಾಡಿದ ಸಚಿವ, ಕೊರೋನಾ ಸಮಯದಲ್ಲಿ ನಾನು ಎರಡು ಕೆಲಸ ಮಾಡಿದೆ. ಮನೆಯಲ್ಲೇ ಅಡುಗೆ ಮಾಡುವುದನ್ನು ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲು ಆರಂಭಿಸಿದೆ. ಆನ್‌ಲೈನ್‌ನಲ್ಲಿ ಬಹಳಷ್ಟು ಭಾಷಣ ಮಾಡಿದೆ. ಅದನ್ನು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡುತ್ತಿದ್ದೆವು. ಅದಕ್ಕೆ ವ್ಯಾಪಕವಾದ ಪ್ರೇಕ್ಷಕರು ಸಿಕ್ಕಿದ್ದಾರೆ. ಈಗ ಯೂಟ್ಯೂಬ್ ನನಗೆ ತಿಂಗಳಿಗೆ 4 ಲಕ್ಷ ರೂಪಾಯಿ ಪಾವತಿಸುತ್ತದೆ ಎಂದಿದ್ದಾರೆ.

ಉತ್ತಮ ಹೆದ್ದಾರಿ ಬೇಕಾ? ಟೋಲ್ ಕಟ್ಟಿ: ಟೋಲ್ ವಿರೋಧಕ್ಕೆ ಗಡ್ಕರಿ ಉತ್ತರ

ತನ್ನ ಹಿಂದಿನ ಒಂದು ಘಟನೆಯನ್ನು ನೆನಪಿಸಿಕೊಳ್ಳುತ್ತಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ತನ್ನ ಪತ್ನಿಗೆ ಹೇಳದೆ ತನ್ನ ಮಾವನ ಮನೆಯನ್ನು ಕೆಡವಲು ಆದೇಶಿಸಿದನೆಂದು ಹೇಳಿದ್ದಾರೆ. ನಾನು ಹೊಸದಾಗಿ ಮದುವೆಯಾಗಿದ್ದೆ. ನನ್ನ ಮಾವ ಮನೆ ರಸ್ತೆ ಮಧ್ಯದಲ್ಲಿತ್ತು. ನನ್ನ ಹೆಂಡತಿಗೆ ಹೇಳದೆ ನಾನು ನನ್ನ ಮಾವನ ಮನೆಯನ್ನು ಕೆಡವಲು ಆದೇಶಿಸಿದ್ದೆ ಎಂದಿದ್ದಾರೆ. ಅಲ್ಲಿ ಮನೆ ಇದೆ. ರಸ್ತೆ ನಿರ್ಮಿಸಲು ಅದನ್ನು ನೆಲಸಮ ಮಾಡಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು ಎಂದು ಸಚಿವರು ಹೇಳಿದ್ದಾರೆ.

ಸುವರ್ಣ 24x7 ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಗುರುಗ್ರಾಮ್ ಲೋಕಸಭಾ ಸದಸ್ಯ ರಾವ್ ಇಂದರ್ಜಿತ್ ಸಿಂಗ್ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದರು.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ, ಸುಮಾರು ₹ 95,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಮಾರ್ಚ್ 2023 ರ ವೇಳೆಗೆ ಪೂರ್ಣಗೊಳ್ಳಲಿದೆ. ಬಹುಪಾಲು ಕೆಲಸಗಳನ್ನು ಈಗಾಗಲೇ ಗುತ್ತಿಗೆದಾರರಿಗೆ ನೀಡಲಾಗಿದೆ ಎಂದು ಲೋಡ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಯೋಜನೆಯ ಕೆಲಸದ ಸ್ಥಿತಿಯನ್ನು ಪರಿಶೀಲಿಸಿದ ನಂತರ ಗಡ್ಕರಿ ಹೇಳಿದ್ದಾರೆ.

ಹರಿಯಾಣದಲ್ಲಿ ಬರುವ ಹೆದ್ದಾರಿಯ ಸುಮಾರು 160 ಕಿಲೋಮೀಟರುಗಳ ಕೆಲಸವು ಮಾರ್ಚ್ 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ದೆಹಲಿಯಿಂದ ರಾಜಸ್ಥಾನದ ದೌಸಾ ಮತ್ತು ವಡೋದರಾದಿಂದ ಅಂಕಲೇಶ್ವರದವರೆಗಿನ ರಸ್ತೆಯ ಒಂದು ಭಾಗವನ್ನು ಮಾರ್ಚ್ 2022 ಕ್ಕೆ ನಿರ್ಮಿಸಲಾಗುವುದು ಎಂದಿದ್ದಾರೆ.

Follow Us:
Download App:
  • android
  • ios