ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶರ್ಮಿಳಾ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಮಂಗಳವಾರ ತಮ್ಮ ಪಕ್ಷದ ನಾಯಕರ ಸಭೆ ನಡೆಸಿದ್ದರು. ಅದರ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ನವದೆಹಲಿ (ಜನವರಿ 5, 2024): ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌.ರಾಜಶೇಖರ ರೆಡ್ಡಿ ಪುತ್ರಿ, ಹಾಲಿ ಮುಖ್ಯಮಂತ್ರಿ ಜಗನ್‌ಮೋಹನ ರೆಡ್ಡಿ ಸೋದರಿ ಹಾಗೂ ವೈಎಸ್‌ಆರ್‌ ತೆಲಂಗಾಣ ಪಕ್ಷದ ನಾಯಕಿ ವೈ.ಎಸ್‌.ಶರ್ಮಿಳಾ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಜೊತೆಗೆ ತಮ್ಮ ಪಕ್ಷವನ್ನೂ ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾಯಕ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಗುರುವಾರ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆಯಾದರು. ಬಳಿಕ ಮಾತನಾಡಿ, ‘ಪಕ್ಷ ಯಾವುದೇ ಹೊಣೆ ನೀಡಿದರೂ ನಿಭಾಯಿಸುತ್ತೇನೆ. ತಂದೆ ರಾಜಶೇಖರ ರೆಡ್ಡಿ ಕಾಂಗ್ರೆಸ್‌ನ ದೊಡ್ಡ ನಾಯಕರಾಗಿದ್ದರು. ಅವರ ಹೆಜ್ಜೆಯಲ್ಲಿ ಸಾಗುತ್ತಿರುವುದಕ್ಕೆ ಸಂತೋಷವಿದೆ. ವೈಎಸ್‌ಆರ್‌ಗೆ ರಾಹುಲ್‌ ಗಾಂಧಿಯವರನ್ನು ಪ್ರಧಾನಿಯನ್ನಾಗಿ ನೋಡುವ ಆಸೆಯಿತ್ತು. ಆ ಕನಸನ್ನು ಈಡೇರಿಸಲು ಕೆಲಸ ಮಾಡುತ್ತೇನೆ. ಭಾರತ್‌ ಜೋಡೋ ಯಾತ್ರೆ ಮೂಲಕ ರಾಹುಲ್‌ ಈ ದೇಶದ ಮನ ಗೆದ್ದಿದ್ದಾರೆ’ ಎಂದು ಹೇಳಿದರು.

ಇದನ್ನು ಓದಿ: ಜಗನ್‌ ಸೋದರಿ ಶರ್ಮಿಳಾ ಪಕ್ಷ ಕಾಂಗ್ರೆಸ್ಸಲ್ಲಿ ವಿಲೀನ! ಇಂದು ಘೋಷಣೆ?

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶರ್ಮಿಳಾ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಮಂಗಳವಾರ ತಮ್ಮ ಪಕ್ಷದ ನಾಯಕರ ಸಭೆ ನಡೆಸಿದ್ದರು. ಅದರ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಇದನ್ನು ಓದಿ: ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ಸಹೋದರಿ ವೈಎಸ್‌ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆ?