ವೈಎಸ್‌ಆರ್‌ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಪಕ್ಷದಲ್ಲಿ ವಿಲೀನಗೊಳಿಸಿ ತಾವೂ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಆಂಧ್ರಪ್ರದೇಶದ  ಹಾಲಿ ಮುಖ್ಯಮಂತ್ರಿ ಜಗನ್‌ಮೋಹನ ರೆಡ್ಡಿಯವರ ಸೋದರಿ ವೈ.ಎಸ್‌.ಶರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಹೈದರಾಬಾದ್‌: ವೈಎಸ್‌ಆರ್‌ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಪಕ್ಷದಲ್ಲಿ ವಿಲೀನಗೊಳಿಸಿ ತಾವೂ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌.ರಾಜಶೇಖರ ರೆಡ್ಡಿಯವರ ಪುತ್ರಿ ಹಾಗೂ ಹಾಲಿ ಮುಖ್ಯಮಂತ್ರಿ ಜಗನ್‌ಮೋಹನ ರೆಡ್ಡಿಯವರ ಸೋದರಿ ವೈ.ಎಸ್‌.ಶರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ತಮ್ಮನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸುವುದಾಗಿ ಕಾಂಗ್ರೆಸ್‌ ವರಿಷ್ಠರು ಭರವಸೆ ನೀಡಿದ್ದಾರೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡುವುದಾಗಿ ತಿಳಿಸಿದ್ದಾರೆಂದು ಆಪ್ತರ ಬಳಿ ಶರ್ಮಿಳಾ ಹೇಳಿದ್ದಾರೆ ಎಂದು ವರದಿಯಾಗಿದೆ. ಈಗ ಅಸ್ತಿತ್ವದಲ್ಲಿಲ್ಲದ ವೈಎಸ್‌ಆರ್‌ ತೆಲಂಗಾಣ ಪಕ್ಷದ ಗ್ರೇಟರ್‌ ಹೈದರಾಬಾದ್‌ ಅಧ್ಯಕ್ಷ ರಾಜಗೋಪಾಲ್‌ ಅವರು ಶರ್ಮಿಳಾ ತಮಗೆ ಈ ಮಾಹಿತಿ ನೀಡಿದ್ದಾರೆಂದು ಕೆಲ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಲ್ಲದೆ ರಾಜ್ಯಸಭೆ ಸದಸ್ಯತ್ವ ಪಡೆಯುವ ಬಗ್ಗೆ ಜ.8ರಂದು ನಿರ್ಧರಿಸುವುದಾಗಿಯೂ ಶರ್ಮಿಳಾ ಹೇಳಿದ್ದಾರೆ ಎಂದಿದ್ದಾರೆ.

ಜಗನ್‌ ಸೋದರಿ ಶರ್ಮಿಳಾ ಕಾಂಗ್ರೆಸ್‌ಗೆ: ವೈಎಸ್‌ಆರ್‌ ತೆಲಂಗಾಣ ಪಕ್ಷ ಕಾಂಗ್ರೆಸ್ಸಲ್ಲಿ ವಿಲೀನ

ಜ.4ರಂದು ದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು.

ಬಿಜೆಪಿ ತೊರೆದ ಶ್ರೀರಾಮುಲು ತಂಗಿ ಶಾಂತಾ, ಬಳ್ಳಾರಿ ಬಿಟ್ಟು ಆಂಧ್ರದ ವೈಎಸ್‌ಆರ್‌ನಿಂದ ಲೋಕಸಭೆಗೆ ಸ್ಪರ್ಧೆ!