ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಷರೀಫ್ | ನರಸಿಂಹ ರಾವ್ ಸಂಪುಟದಲ್ಲಿ ರೈಲ್ವೇ ಸಚಿವರಾಗಿ ಸೇವೆ ಸಲ್ಲಿಸಿದ್ದ ಜಾಫರ್  ಷರೀಫ್ 

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್, ಬಳಿಕ ಹಿರಿಯ ನಟ-ರಾಜಕಾರಣಿ ಅಂಬರೀಷ್ ನಿಧನದಿಂದ ಚೇತರಿಸುವ ಮುನ್ನವೇ, ಕರ್ನಾಟಕಕ್ಕೆ ಮತ್ತೊಂದು ಆಘಾತವಾಗಿದೆ. ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ವಿಧಿವಶರಾಗಿದ್ದಾರೆ.

 ಷರೀಫ್ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

Scroll to load tweet…

ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 'ನಮ್ಮ ಕುಟುಂಬದೊಂದಿಗೆ ಜಾಫರ್ ಷರೀಫ್ ಅವರು ಆತ್ಮೀಯ ಸಂಬಂಧ ಹೊಂದಿದ್ದರು. ಕೇಂದ್ರ ಸಚಿವರಾಗಿ ಅವರು ನಾಡಿಗೆ, ದೇಶಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ರೈಲ್ವೆ ಸಚಿವರಾಗಿ ಕರ್ನಾಟಕ ರಾಜ್ಯಕ್ಕೆ ಅವರು ನೀಡಿದ ಕೊಡುಗೆ ಅತ್ಯಂತ ಶ್ಲಾಘನೀಯ. ರೈಲ್ವೆ ಸಚಿವರಾಗಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚು ಕೊಡುಗೆ ನೀಡಿದವರಲ್ಲಿ ಜಾಫರ್ ಶರೀಫರು ಅಗ್ರಗಣ್ಯರು. ರಾಷ್ಟ್ರಾದ್ಯಂತ ಮೀಟರ್ ಗೇಜ್ ಹಳಿಗಳನ್ನು ಬ್ರಾಡ್ಗೇಜ್ ಗೆ ಪರಿವರ್ತಿಸಿ ಶ್ರೇಯ ಇವರದ್ದು' ಎಂದು ಮುಖ್ಯಮಂತ್ರಿ ಗಳು ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ:

Scroll to load tweet…

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಂತಾಪ:

Scroll to load tweet…
Scroll to load tweet…

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶೋಕ:

Scroll to load tweet…

ಡಿಸಿಎಂ ಪರಮೇಶ್ವರ್ ಸಂತಾಪ:

Scroll to load tweet…
Scroll to load tweet…