Asianet Suvarna News

IPL ಸಂಪೂರ್ಣ ವೇಳಾಪಟ್ಟಿ ಬಿಡುಗಡೆ: ಮೊದಲ ಪಂದ್ಯದಲ್ಲಿ CSK-MI ಹೋರಾಟ!

IPL 2020 ಟೂರ್ನಿ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ. ತೀವ್ರ ಕುತೂಹಲ ಕೆರಳಿಸಿದ ವೇಳಾಪಟ್ಟಿ ಇದೀಗ ಬಹಿರಂಗಗೊಂಡಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ.
 

BCCI announces complete schedule for  IPL 2020
Author
Bengaluru, First Published Sep 6, 2020, 5:19 PM IST
  • Facebook
  • Twitter
  • Whatsapp

ಮುಂಬೈ(ಸೆ.06):  ಐಪಿಎಲ್ 2020 ಟೂರ್ನಿ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ. ಕೊರೋನಾ ವೈರಸ್ ಕಾರಣ ದುಬೈಗೆ ಸ್ಥಳಾಂತರಗೊಂಡಿರುವ ಐಪಿಎಲ್ ಟೂರ್ನಿ ಸೆಪ್ಟೆಂಬರ್ 19 ರಿಂದ ಆರಂಭಗೊಳ್ಳಲಿದೆ. ಕೆಲ ಕಾರಣಗಳಿಂದ ವೇಳಾಪಟ್ಟಿ ಬಿಡುಗಡೆ ವಿಳಂಬವಾಗಿತ್ತು. ಇದೀಗಿ ಬಿಸಿಸಿಐ ಟೂರ್ನಿ ವೇಳಾಪಟ್ಟಿ ಬಿಡುಗಡೆ ಮಾಡಿದೆ. 

ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಹೋರಾಟ ನಡೆಸಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಸೆಪ್ಟೆಂಬರ್  21 ರಂದು ದುಬೈ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜಿಸಲಾಗಿದೆ.

ಡಬಲ್ ಹೆಡರ್ ಮ್ಯಾಚ್‌ನ ಮೊದಲ ಪಂದ್ಯ 3.30PM ಆರಂಭಗೊಳ್ಳಲಿದೆ. ಇನ್ನುಳಿದ ಸಂಜೆ ಪಂದ್ಯೆ 7.30ಕ್ಕೆ ಆರಂಭಗೊಳ್ಳಲಿದೆ. 


Follow Us:
Download App:
  • android
  • ios