ಚೆನ್ನೈ(ಮಾ.02): 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಸಜ್ಜಾಗುತ್ತಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿಗಿಂದು(ಮಾರ್ಚ್ 02) ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅದ್ಭುತ ಸ್ವಾಗತ ನೀಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಧೋನಿ ಆಗಮನವನ್ನು ಮೊದಲ ದಿನದ ಮೊದಲ ಶೋನ ಅನುಭವ ಎಂದು ಟ್ವೀಟ್ ಮಾಡಿದೆ. 

ಹೀಗಿದೆ ನೋಡಿ ಆ ವಿಡಿಯೋ:

ಚೆನ್ನೈ ಸೂಪರ್ ಕಿಂಗ್ಸ್ ಟ್ರೈನಿಂಗ್ ಕ್ಯಾಂಪ್ ಮಾರ್ಚ್ 19ರಿಂದ ಆರಂಭವಾಗಲಿದ್ದು, ಧೋನಿ ಮಾರ್ಚ್ 3ರಿಂದಲೇ ಕ್ರಿಕೆಟ್ ಅಭ್ಯಾಸ ಆರಂಭಿಸಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಕಳೆದ ವಾರವಷ್ಟೇ ತಿಳಿಸಿದ್ದರು. 2020ರ ಐಪಿಎಲ್ ಟೂರ್ನಿಯು ಮಾರ್ಚ್ 29ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ ಸೆಣಸಲಿದೆ. 

RCB ಈಗ ಸಂಪೂರ್ಣ ಕನ್ನಡಮಯ; IPLನಲ್ಲಿ ಕೊಹ್ಲಿ ಸೈನ್ಯದ ಹೊಸ ಅಧ್ಯಾಯ!

2019ರ ಐಸಿಸಿ ಏಕದಿನ ವಿಶ್ವಕಪ್ ಬಳಿಕ ಧೋನಿ ಸ್ಫರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಇನ್ನು ಇತ್ತೀಚೆಗಷ್ಟೇ ಬಿಸಿಸಿಐ ಕೇಂದ್ರೀಯ ಗುತ್ತಿಗೆಯಿಂದಲೂ ಹೊರಬಿದ್ದಿದ್ದರು. ಧೋನಿ ಐಪಿಎಲ್‌ನಲ್ಲಿ ನೀಡುವ ಪ್ರದರ್ಶನ ಅಂತಾರಾಷ್ಟ್ರೀಯ ಕಮ್‌ಬ್ಯಾಕ್ ತೀರ್ಮಾನಿಸಲಿದೆ ಎಂದು ಕೆಲ ತಿಂಗಳ ಹಿಂದೆ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದರು. 

#NewsIn100Seconds | ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್:

"