Asianet Suvarna News Asianet Suvarna News

IPL 2020 ಈ ಮೂರು ತಂಡಗಳು ಸಲ ಕಪ್ ಕಪ್‌ ಗೆಲ್ಲಬಹುದು ಎಂದ ಬ್ರಾಡ್‌ ಹಾಗ್..!

ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಆಸೀಸ್ ಮಾಜಿ ಕ್ರಿಕೆಟಿಗ 3 ತಂಡಗಳಲ್ಲಿ ಒಂದು ತಂಡ ಈ ಸಲ ಕಪ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಯಾವು ಆ 3 ತಂಡಗಳು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

Former Australian Cricketer Brad Hogg Predicts these 3 Team can win IPL 2020 Trophy
Author
Bengaluru, First Published Sep 2, 2020, 6:22 PM IST
  • Facebook
  • Twitter
  • Whatsapp

ಬೆಂಗಳೂರು(ಸೆ.02): ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಯಾರು ಕಪ್ ಗೆಲ್ಲಲಿದ್ದಾರೆ ಎನ್ನುವುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. 

ಮಿಲಿಯನ್ ಡಾಲರ್ ಟೂರ್ನಿ ಎನಿಸಿಕೊಂಡಿರುವ ಐಪಿಎಲ್ ಟೂರ್ನಿಗೆ ಈ ಬಾರಿ ಯುನೈಟೆಡ್ ಅರಬ್ ಎಮಿರೇಟ್ಸ್‌ ಆತಿಥ್ಯ ವಹಿಸಿದ್ದು, ಸೆಪ್ಟೆಂಬರ್ 19ರಿಂದ ಆರಂಭವಾಗಿ ನವೆಂಬರ್ 10ರ ವರೆಗೆ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ 2020ನೇ ಸಾಲಿನ ಐಪಿಎಲ್‌ ಟೂರ್ನಿ ಕೊರೋನಾ ಭೀತಿಯಿಂದಾಗಿ ಯುಎಇಗೆ ಸ್ಥಳಾಂತರವಾಗಿದೆ. ಈಗಾಗಲೇ 8 ತಂಡಗಳು ದುಬೈಗೆ ಬಂದಿಳಿದಿವೆ.

ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಶಿವಂ ಜೈಸ್ವಾಲ್ ಎನ್ನುವ ಅಭಿಮಾನಿಯೊಬ್ಬ ಆಸೀಸ್‌ ಸ್ಪಿನ್ನರ್‌ಗೆ 2020ರಲ್ಲಿ ಯಾವ ತಂಡ ಐಪಿಎಲ್ ಕಪ್ ಗೆಲ್ಲಲಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ಬ್ರಾಡ್ ಹಾಗ್, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಇಲ್ಲವೇ ಕೋಲ್ಕತ ನೈಟ್‌ರೈಡರ್ಸ್ ತಂಡವು ಕಪ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ನೆನಪಿದೆಯಾ ಚೊಚ್ಚಲ ಆವೃತ್ತಿಯ ಐಪಿಎಲ್‌ ಟೂರ್ನಿಯನ್ನು ರಾಜಸ್ಥಾನ ರಾಯಲ್ಸ್ ಗೆದ್ದಿದ್ದು ಹೇಗೆಂದು..?

ಕಳೆದ 12 ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಈ ಬಾರಿ ಹೊಸ ಹುರುಪಿನೊಂದಿಗೆ ವಿರಾಟ್ ಕೊಹ್ಲಿ ಪಡೆ ಅದೃಷ್ಠ ಪರೀಕ್ಷೆಗೆ ಮುಂದಾಗಿದೆ. ಇನ್ನು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ದಾಖಲೆಯ 4 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ, ಶಾರುಕ್ ಖಾನ್ ಒಡೆತನದ ಕೋಲ್ಕತ ನೈಟ್‌ ರೈಡರ್ಸ್ ತಂಡ ಎರಡು ಬಾರಿ ಐಪಿಎಲ್ ಪ್ರಶಸ್ತಿಗೆ ಮುತ್ತಿಕ್ಕಿದೆ.
 

Follow Us:
Download App:
  • android
  • ios