ದುಬೈ(ಅ.04): ಸೂಪರ್ ಸಂಡೇಯಲ್ಲಿನ ಎರಡನೇ ಪಂದ್ಯದಲ್ಲಿಂದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ದುಬೈ ಅಂತರಾಷ್ಟ್ರೀಯ ಮೈದಾನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವಬನ್ನು ಎದುರಿಸಲಿದೆ.

ಇದುವರೆಗೂ ಉಭಯ ತಂಡಗಳು ತಲಾ 4 ಪಂದ್ಯಗಳನ್ನಾಡಿದ್ದು, ಒಂದರಲ್ಲಿ ಗೆಲುವು, ಮೂರರಲ್ಲಿ ಸೋಲನ್ನು ಕಂಡಿದ್ದು ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನದಲ್ಲಿವೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 18ನೇ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ.

ಐಪಿಎಲ್ 2020; ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಅಯ್ಕೆ

ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಮಯಾಂಕ್ ಅಗರ್‌ವಾಲ್, ಕೆ.ಎಲ್. ರಾಹುಲ್, ನಿಕೋಲಸ್ ಪೂರನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಕರುಣ್ ನಾಯರ್ ನಾಯಕನ ನಂಬಿಕೆ ಉಳಿಸಿಕೊಳ್ಳುವಂತಹ ಆಟವಾಡಬೇಕಾಗಿದೆ. ಇಂದಿನ ಪಂದ್ಯದಲ್ಲಿ ಪಂಜಾಬ್ ತಂಡದಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆಯಿದ್ದು, ಜೇಮ್ಸ್ ನೀಶಮ್ ಅವರು ಕಳೆದೆರಡು ಪಂದ್ಯಗಳಲ್ಲಿ ದುಬಾರಿಯಾಗಿದ್ದು, ಅವರಿಗೆ ವಿಶ್ರಾಂತಿ ನೀಡಿ ಮುಜೀಬ್ ಉರ್ ರೆಹಮಾನ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. 

ಇನ್ನು ಮಹೇಂದ್ರ ಸಿಂಗ್ ಧೋನಿ ಪಡೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲನ್ನು ಕಂಡಿದ್ದು, ಗೆಲುವಿಗಾಗಿ ಹಪಹಪಿಸುತ್ತಿದೆ. ಶೇನ್‌ ವಾಟ್ಸನ್ ದೊಡ್ಡ ಇನಿಂಗ್ಸ್ ಆಡಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಇನ್ನು ರಾಯುಡು ಹಾಗೂ ಡುಪ್ಲೆಸಿಸ್ ಮೈಚಳಿ ಬಿಟ್ಟು ಬ್ಯಾಟ್‌ ಬೀಸಿದರೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡಕ್ಕೆ ತಿರುಗೇಟು ನೀಡಬಹುದಾಗಿದೆ.

ಪಂದ್ಯ ಆರಂಭ: ಸಂಜೆ 7.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್