ದುಬೈ(ಸೆ.25):  ಐಪಿಎಲ್ ಟೂರ್ನಿಯ 7ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ.  ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ  ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಧೋನಿ ತಂಡದಲ್ಲಿ ಮಹತ್ವದ ಒಂದು ಬದಲಾವಣೆ ಮಾಡಿದ್ದಾರೆ. ವೇಗಿ ಎನ್‌ಗಿಡಿ ಬದಲು ಜೋಶ್ ಹೇಜಲ್‌ವುಡ್ ತಂಡ ಸೇರಿಕೊಂಡಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ. 

 

ಕಳೆದ ಪಂದ್ಯದಲ್ಲಿ ಇಂಜುರಿಗೆ ತುತ್ತಾದ ಆರ್ ಅಶ್ವಿನ್ ಬದಲು ಹಿರಿಯ ಸ್ಪಿನ್ನರ್ ಅಮಿತ್ ಮಿಶ್ರಾ ತಂಡ ಸೇರಿಕೊಂಡಿದ್ದಾರೆ. ಇನ್ನ ವೇಗಿ ಮೊಹಿತ್ ಶರ್ಮಾ ಬದಲು ಅವೇಶ್ ಖಾನ್ ಡೆಲ್ಲಿ ತಂಡ ಸೇರಿಕೊಂಡಿದ್ದಾರೆ.

 

ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಮುಗ್ಗರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಸೂಪರ್ ಓವರ್ ಮೂಲಕ ಪಂದ್ಯ ಗೆದ್ದು ಗೆಲುವಿನ ಲಯದಲ್ಲಿದೆ.