ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ನಾಯಕ ಧೋನಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ

ಶಾರ್ಜಾ(ಸೆ.22) ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ನಾಯಕ ಎಂ ಎಸ್ ಧೋನಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಗೆ ಶಾರ್ಜಾ ಮೈದಾನ ಇದೇ ಮೊದಲ ಬಾರಿಗೆ ಆತಿಥ್ಯವನ್ನು ವಹಿಸಿದೆ.

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ರೋಚಕವಾಗಿ ಮಣಿಸಿರುವ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಕೂಡಾ ಅಂತಹದ್ದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ. ಇನ್ನು ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲೂ ತಿರುಗೇಟು ನೀಡಲು ಎದುರು ನೋಡುತ್ತಿದೆ.

Scroll to load tweet…
Scroll to load tweet…

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅಂಬಟಿ ರಾಯುಡು ಬದಲಿಗೆ ಋತುರಾಜ್ ಗಾಯಕ್ವಾಡ್ ಸಿಎಸ್‌ಕೆ ತಂಡ ಕೂಡಿಕೊಂಡಿದ್ದಾರೆ.

ತಂಡಗಳು ಹೀಗಿವೆ: 

Scroll to load tweet…