ದುಬೈ(ಅ.20): ಕಳೆದ ಪಂದ್ಯದಲ್ಲಿ ಗೆಲುವಿಗಾಗಿ ಎರಡೆರಡು ಸೂಪರ್ ಓವರ್ ಪಂದ್ಯ ಆಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆತ್ಮವಿಶ್ವಾಸ ಹೆಚ್ಚಿದೆ. ಬಲಿಷ್ಠ ಮುಂಬೈ ತಂಡವನ್ನೇ  ಅರ್ಹ ರೀತಿಯಲ್ಲಿ ಮಣಿಸಿದ ಪಂಜಾಬ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್ ನೀಡಲು ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ರಿಷಬ್ ಪಂತ್, ಶಿಮ್ರೊನ್ ಹೆಟ್ಮೆಯರ್ ಹಾಗೂ ಡೇನಿಯಲ್ ಸ್ಯಾಮ್ ತಂಡ ಸೇರಿಕೊಂಡಿದ್ದಾರೆ. ಇತ್ತ ಪಂಜಾಬ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ಕ್ರಿಸ್ ಜೋರ್ಡನ್ ಬದಲು ಜೇಮ್ಸ್ ನೀಶಮ್ ತಂಡ ಸೇರಿಕೊಂಡಿದ್ದಾರೆ.

7 ಗೆಲುವಿನೊಂದಿಗೆ 14 ಅಂಕ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇತ್ತ ಪಂಜಾಬ್ 3 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.