ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಲೀಗ್ ಪಂದ್ಯ ಆಡಲು ಸಜ್ಜಾಗಿದೆ. ಗೆದ್ದ ತಂಡದ ಪ್ಲೇ ಆಫ್ ಸ್ಥಾನ ಖಚಿತಗೊಳ್ಳಲಿದೆ. ಹೀಗಾಗಿ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು?

ಅಬು ಧಾಬಿ(ನ.02): 13ನೇ ಆವೃತ್ತಿ ಐಪಿಎಲ್ ಟೂರ್ನಿಯ 55ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಉಭಯ ತಂಡಗಳು ಸತತ ಸೋಲಿನಿಂದ ಆತಂಕಗೊಂಡಿದೆ. ಇಷ್ಟೇ ಅಲ್ಲ ಇಂದು ಪ್ಲೇ ಆಫ್ ಸ್ಥಾನ ಭದ್ರಪಡಿಸಿಕೊಳ್ಳಲು ಕೊನೆಯ ಅವಕಾಶವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

IPL 2020: ಪಾಯಿಂಟ್‌ ಟೇಬಲ್ ಲೆಕ್ಕಾಚಾರವೇನು?

ಡೆಲ್ಲಿ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ಅಜಿಂಕ್ಯ ರಹಾನೆ, ಅಕ್ಸರ್ ಪಟೇಲ್ ಹಾಗೂ ಸ್ಯಾಮ್ ತಂಡ ಸೇರಿಕೊಂಡಿದ್ದಾರೆ. ಆರ್‌ಸಿಬಿ ತಂಡದಲ್ಲೂ 1 ಬದಲಾವಣೆ ಮಾಡಲಾಗಿದೆ. ನವದೀಪ್ ಸೈನಿ ಬದಲು, ಶಹಬ್ಬಾಜ್ ಅಹಮ್ಮದ್ ತಂಡ ಸೇರಿಕೊಂಡಿದ್ದಾರೆ.

Scroll to load tweet…

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಡೆಲ್ಲಿ ಕೂಡ 14 ಅಂಕಪ ಪಡೆದಿದೆ. ಆದರೆ ನೆಟ್‌ರನ್ ರೇಟ್ ಆಧಾರದಲ್ಲಿ 3ನೇ ಸ್ಥಾನದಲ್ಲಿದೆ. ಈ ಪಂದ್ಯ ಸೋತ ತಂಡಕ್ಕೆ ಪ್ಲೇ ಆಫ್ ಸ್ಥಾನ ಗಿಟ್ಟಿಸಿಕೊಳ್ಳಲು ಕೊನೆಯ ಅವಕಾಶವಿದೆ. ಇದಕ್ಕೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ವಿರುದ್ದದ ಅಂತಿಮ ಲೀಗ್ ಪಂದ್ಯದಲ್ಲಿ ಸೋಲಬೇಕು.