ದುಬೈ(ನ.05):  13ನೇ ಆವೃತ್ತಿ ಲೀಗ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಸಂಪಾದಿಸಿದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಪ್ರವೇಶಕ್ಕಾಗಿ ಹೋರಾಟ ನಡೆಸುತ್ತಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂಬೈ ತಂಡದಲ್ಲಿ ಪ್ರಮುಖ 3 ಬದಲಾವಣೆ ಮಾಡಲಾಗಿದೆ. ಅಂತಿಮ ಲೀಗ್ ಪಂದ್ಯಕ್ಕೆ ವಿಶ್ರಾಂತಿ ನೀಡಿದ್ದ ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೋಲ್ಟ್ ಹಾಗೂ ಹಾರ್ಧಿಕ್ ಪಾಂಡ್ಯ ಮತ್ತೆ ತಂಡ ಸೇರಿಕೊಂಡಿದ್ದಾರೆ. 

 

ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಸತತ 4 ಸೋಲಿನ ಬಳಿಕ ಆರ್‌ಸಿಬಿ ವಿರುದ್ಧ ಗೆಲುವು ಸಾಧಿಸಿ ಪ್ಲೇ ಆಫ್ ಸ್ಥಾನ ಭದ್ರಪಡಿಸಿಕೊಂಡಿತು.