Asianet Suvarna News Asianet Suvarna News

IPL 2020: ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ

ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಎಲ್ಲಾ ಪಂದ್ಯ ಗೆಲ್ಲಲೇಬೇಕು, ಇತ್ತ ಡೆಲ್ಲಿ ಕ್ಯಾಪಿಟಲ್ಸ್  ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳಲು ಹೋರಾಟ ನಡೆಸಲಿದೆ. ಈ ಕಾರಣಗಳಿಂದ ಇಂದಿನ ಪಂದ್ಯ ಸಾಕಷ್ಟ ಕುತೂಹಲ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
 

IPL 2020 Delhi Capitals opt to bowl against srh ckm
Author
Bengaluru, First Published Oct 27, 2020, 7:02 PM IST

ದುಬೈ(ಅ.27): ಪ್ಲೇ ಆಫ್ ಹೋರಾಟ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಇನ್ನೂ ಅಧೀಕೃತವಾಗಿ ಯಾವ ತಂಡ ಕೂಡ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಂಡಿಲ್ಲ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಇಂದಿನ ಪಂದ್ಯ ಈ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 

 

ಡೆಲ್ಲಿ ಕ್ಯಾಪಿಟಲ್ಲ್ 11 ಪಂದ್ಯದಲ್ಲಿ 7 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ 11 ರಲ್ಲಿ 4 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. 
 

Follow Us:
Download App:
  • android
  • ios