ಅಬು ಧಾಬಿ(ಸೆ.29): ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ಅಲೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸತತ ಸೋಲು ಕಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ರೋಚಕ ಹೋರಾಟಕ್ಕೆ ಅಬು ಧಾಬಿ ಕ್ರೀಡಾಂಗಣ ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ಅವೇಶ್ ಖಾನ್ ಬದಲು ವೇಗಿ ಇಶಾಂತ್ ಶರ್ಮಾ ತಂಡ ಸೇರಿಕೊಂಡಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ 2 ಬದಲಾವಣೆ ಮಾಡಿದೆ. ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿಗ ವೃದ್ಧಿಮಾನ್ ಸಾಹಾ ಹಾಗೂ ಮೊಹಮ್ಮದ್ ನಬಿಗೆ ಕೊಕ್ ನೀಡಲಾಗಿದ್ದು, ಕೇನ್ ವಿಲಿಯಮ್ಸನ್ ಹಾಗೂ ಅಬ್ದುಲ್ ಸಮದ್ ತಂಡ ಸೇರಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ 2 ಪಂದ್ಯದಲ್ಲಿ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.  ಡೆಲ್ಲಿ ತಂಡ ಬಲಿಷ್ಠ ಬ್ಯಾಟಿಂಗ್ ಹಾಗೂ ಅತ್ಯುತ್ತಮ ಬೌಲಿಂಗ್ ಪಡೆ ಹೊಂದಿದೆ. ಈ ಆವೃತ್ತಿಯಲ್ಲಿ ತಂಡದ ಎಲ್ಲಾ ಆಟಗಾರರು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ಮಧ್ಯಮ ಕ್ರಮಾಂಕ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದೆ.  ಇತ್ತ ಬೌಲಿಂಗ್‌ನಲ್ಲೂ ದುಬಾರಿಯಾಗುತ್ತಿದೆ.