ಅಬು ಧಾಬಿ(ನ.02):  ಐಪಿಎಲ್ ಟೂರ್ನಿಯಲ್ಲಿ ಅಬ್ಬರಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದೇವದತ್ ಪಡಿಕ್ಕಲ್ ಪ್ರತಿ ಪಂದ್ಯದಲ್ಲಿ ಅಬ್ಬರಿಸೋ ಮೂಲಕ ದಾಖಲೆ ಬರೆಯುತ್ತಿದ್ದಾರೆ. ಚೊಚ್ಚಲ ಐಪಿಎಲ್ ಟೂರ್ನಿ ಆಡುತ್ತಿರುವ ಪಡಿಕ್ಕಲ್, ಇದೀಗ ಮತ್ತೊಂದು ದಾಖಲೆ ಬರೆದಿದ್ದಾರೆ. ಚೊಚ್ಚಲ ಐಪಿಎಲ್ ಟೂರ್ನಿಯಲ್ಲಿ ಗರಿಷ್ಠ ರನ್ ಸಿಡಿಸಿದ 2ನೇ ಅನ್‌ಕ್ಯಾಪ್ಡ್ ಪ್ಲೇಯರ್ ಅನ್ನೋ ದಾಖಲೆ ಬರೆದಿದ್ದಾರೆ.

IPL 2020: ಪಾಯಿಂಟ್‌ ಟೇಬಲ್ ಲೆಕ್ಕಾಚಾರವೇನು?..

ಪದಾರ್ಪಣಾ ಪಂದ್ಯದಲ್ಲಿ ಗರಿಷ್ಠ ರನ್ ಸಿಡಿಸಿದ ಅನ್‌ಕ್ಯಾಪ್ ಪ್ಲೇಯರ್ 
616 ಶಾನ್ ಮಾರ್ಶ್ (KXIP in 2008)
443*ದೇವದತ್ ಪಡಿಕ್ಕಲ್ (RCB in 2020)
439 ಶ್ರೇಯಸ್ ಅಯ್ಯರ್ (DD in 2015)

IPL ಟೂರ್ನಿಯಲ್ಲಿ ಅಬ್ಬರಿಸಿರುವ ದೇವದತ್ ಪಡಿಕ್ಕಲ್ 4 ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ.  ಬಹುತೇಕ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ತಂಡಕ್ಕೆ ಉತ್ತಮ ಆರಂಭ ನೀಡಿದ್ದಾರೆ.