ದುಬೈ(ನ.10):  13ನೇ ಆವೃತ್ತಿ ಐಪಿಎಲ್ ಟ್ರೋಫಿ ಗೆಲ್ಲುವ ತಂಡ ಯಾವುದು ಅನ್ನೋದು ಕುತೂಹಲಕ್ಕೆ ಉತ್ತರ ಸಿಗಲಿದೆ. ಪ್ರಶಸ್ತಿಗಾಗಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹೋರಾಟ ನಡೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಹುಲ್ ಚಹಾರ್ ಬದಲು, ಜಯಂತ್ ಯಾದವ್ ತಂಡ ಸೇರಿಕೊಂಡಿದ್ದಾರೆ

ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಮುಂಬೈ ಇಂಡಿಯನ್ಸ್, 2ನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1ನೇ ಕ್ವಾಲಿಫೈಯರ್ ಪಂದ್ಯ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಇತ್ತ ಡೆಲ್ಲಿ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿದೆ. ಡೆಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದರೆ, ಮುಂಬೈ ಇಂಡಿಯನ್ಸ್ 6ನೇ ಬಾರಿ ಈ ಸಾಧನೆ ಮಾಡಿದೆ.