ನವದೆಹಲಿ(ಸೆ.19): ರಾಜಸ್ಥಾನ ರಾಯಲ್ಸ್‌ ತಂಡದ ಆಲ್ರೌಂಡರ್‌ ಬೆನ್‌ ಸ್ಟೋಕ್ಸ್‌, ಕ್ರೈಸ್ಟ್‌ಚರ್ಚ್‌ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಸ್ಟೋಕ್ಸ್‌ ಲಭ್ಯತೆಯ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ಹೊರಬಿದ್ದಿಲ್ಲ. 

ಆದರೆ ಐಪಿಎಲ್‌ ಆರಂಭಕ್ಕೆ ಮುನ್ನ ದಿನ ಸ್ಟೋಕ್ಸ್‌, ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬೌಲಿಂಗ್‌ ಅಭ್ಯಾಸ ಮಾಡುತ್ತಿರುವ ಫೋಟೋವನ್ನು ಪೋಸ್ಟ್‌ ಮಾಡಿದ್ದಾರೆ. ಇದರಿಂದಾಗಿ ಸ್ಟೋಕ್ಸ್‌, ಐಪಿಎಲ್‌ನಲ್ಲಿ ಆಡಬಹುದು ಎಂದು ರಾಯಲ್ಸ್‌ ಅಭಿಮಾನಿಗಳು ಸಂತಸದಿಂದಿದ್ದಾರೆ. 

ಸ್ಟೋಕ್ಸ್‌, ಕಳೆದ ತಿಂಗಳು ನಡೆದಿದ್ದ ಪಾಕ್‌ ವಿರುದ್ಧದ ಟೆಸ್ಟ್‌ ಸರಣಿಯ ಮಧ್ಯದಲ್ಲಿ ತಮ್ಮ ತವರು ಕ್ರೈಸ್ಟ್‌ಚರ್ಚ್‌ಗೆ ತೆರಳಿದ್ದರು. ತಂದೆ ಮೆದುಳು ಕ್ಯಾನ್ಸರ್‌ಗೆ ತುತ್ತಾಗಿ ಚಿಕಿತ್ಸೆಗೆ ಒಳಪಟ್ಟಿದ್ದಾರೆ. ಹೀಗಾಗಿ ಪಾಕಿಸ್ತಾನ ಹಾಗೂ ಆಸ್ಪ್ರೇಲಿಯಾ ವಿರುದ್ಧದ ಸರಣಿಗೂ ಸ್ಟೋಕ್ಸ್‌ ಅಲಭ್ಯರಾಗಿದ್ದರು.

IPL 2020 ಕೊಲ್ಲಿ ರಾಷ್ಟ್ರದಲ್ಲಿ ಚುಟುಕು ಕ್ರಿಕೆಟ್ ಕಲರವ ಶುರು..!

ವಿಶ್ವಕ್ರಿಕೆಟ್‌ನ ಸ್ಟಾರ್ ಆಲ್ರೌಂಡರ್‌ಗಳಲ್ಲಿ ಒಬ್ಬರಾಗಿರುವ ಬೆನ್ ಸ್ಟೋಕ್ಸ್ ಏಕಾಂಗಿಯಾಗಿ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಕಳೆದ ವರ್ಷ ನಡೆದ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ಇಂಗ್ಲೆಂಡ್ ತಂಡ ಚೊಚ್ಚಲ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

"