ದುಬೈ(ನ.05):  ನೇರವಾಗಿ ಐಪಿಎಲ್ ಟೂರ್ನಿ ಫೈನಲ್ ಪ್ರವೇಶಿಸಲು ಮುುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿದೆ. ಇದೀಗ ಯಾರು ಫೈನಲ್ ಪ್ರವೇಶಿಸುತ್ತಾರೆ ಅನ್ನೋ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ಬೃಹತ್ ಮೊತ್ತದ ನಿರೀಕ್ಷೆಯಲ್ಲಿದ್ದ ಮುಂಬೈ ಇಂಡಿಯನ್ಸ್ ಒಂದು ಹಂತದಲ್ಲಿ ಕುಸಿತ ಕಂಡಿತು. ಆದರೆ ದಿಟ್ಟ ಹೋರಾಟದಿಂದ ಮುಂಬೈ ಇಂಡಿಯನ್ಸ್ 200 ರನ್ ಸಿಡಿಸುವಲ್ಲಿ ಯಶಸ್ವಿಯಾಗಿದೆ.  

ಟಾಸ್ ಸೋತು ಬ್ಯಾಟಿಂಗ್ ಇಳಿದ ಮುಂಬೈ ಇಂಡಿಯನ್ಸ್, ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ರೋಹಿತ್ ಶೂನ್ಯ ಸುತ್ತಿದರು. ಆದರೆ ಕ್ವಿಂಟನ ಡಿಕಾಕ್ ಹೋರಾಟ ಮುಂಬೈ ತಂಡಕ್ಕೆ ಚೇತರಿಕೆ ನೀಡಿತು. ಡಿಕಾಕ್ 40 ರನ್ ಸಿಡಿಸಿದರು. ಮತ್ತೆ ಅಬ್ಬರಿಸಿದ ಸೂರ್ಯಕುಮಾರ್ ಯಾದವ್ ಹಾಫ್ ಸೆಂಚುರಿ ಸಿಡಿಸಿದರು.

ಕೀರನ್ ಪೊಲಾರ್ಡ್ ಹಾಗೂ ಕ್ರುನಾಲ್ ಪಾಂಡ್ಯ ಅಬ್ಬರಿಸಲಿಲ್ಲ. ಇತ್ತ ಇಶಾನ್ ಕಿಶನ್ ಹೋರಾಟ ಮುಂದುವರಿಸಿದರು.  ಹಾರ್ದಿಕ್ ಪಾಂಡ್ಯ ಹಾಗೂ ಇಶಾನ್ ಕಿಶನ್ ಜೊತೆಯಾಟದಿಂದ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಪ್ರದರ್ಶನ ನೀಡಿತು. ಇಶಾನ್ ಕಿಶನ್ ಅಜೇಯ 55 ರನ್ ಹಾಗೂ ಹಾರ್ದಿಕ್ ಅಜೇಯ 37 ರನ್ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 5 ವಿಕೆಟ್ ನಷ್ಟಕ್ಕೆ  200 ರನ್ ಸಿಡಿಸಿತು.