13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 7ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಡೆಲ್ಲಿ ತಂಡದ ಅನುಭವಿ ವೇಗಿ ಈ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ದುಬೈ(ಸೆ.25): ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇಂದು(ಸೆ.25) ಬಲಿಷ್ಠ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಇದರ ಬೆನ್ನಲ್ಲೇ ಡೆಲ್ಲಿ ಪಾಳಯದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ವೇಗಿ ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. 

ಹೌದು, ಡೆಲ್ಲಿ ತಂಡದ ಅನುಭವಿ ವೇಗಿ ಇಶಾಂತ್ ಶರ್ಮಾ ಗಾಯದ ಸ್ವರೂಪ ಗಂಭೀರವಾಗಿದ್ದು, ಐಪಿಎಲ್ ಟೂರ್ನಿಯ ಮುಂದಿನ 2 ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ತಂಡದ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಪೂರ್ವಭಾವಿ ಅಭ್ಯಾಸದ ವೇಳೆ ಡೆಲ್ಲಿ ತಂಡದ ವೇಗಿ ಇಶಾಂತ್ ಶರ್ಮಾ ಹಿಮ್ಮಡಿ ಸೆಳೆತಕ್ಕೆ ಒಳಗಾಗಿದ್ದರು.

ಕೊಹ್ಲಿ ಅನುಷ್ಕಾ **** ಜತೆ ಅಭ್ಯಾಸ ಮಾಡಿದ್ದಾರೆ ಎಂದ ಗವಾಸ್ಕರ್..! ಕಿಡಿಕಾರಿದ ಅನುಷ್ಕಾ

ಹೀಗಾಗಿ ಇಶಾಂತ್ ಶರ್ಮಾ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸೆಪ್ಟೆಂಬರ್ 29ರಂದು ಅಬುಧಾಬಿಯ ಶೇಖ್ ಝಾಯೆದ್ ಮೈದಾನದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧದ ಪಂದ್ಯವನ್ನು ಮಿಸ್ ಮಾಡಿಕೊಳ್ಳಲಿದ್ದಾರೆ.

ಕಿಂಗ್ಸ್ ಇಲೆವನ್ ಪಂಜಾಬ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕಗಿಸೋ ರಬಾಡ ಅವರ ಮಾರಕ ದಾಳಿಯ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೂಪರ್ ಓವರ್‌ನಲ್ಲಿ ಗೆಲುವಿನ ನಗೆ ಬೀರಿತ್ತು.