ದುಬೈ(ಅ.04): 13ನೇ ಆವೃತ್ತಿ ಐಪಿಎಲ್ ಟೂರ್ನಿಯ 18ನೇ ಲೀಗ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಅದೃಷ್ಟ ಪರೀಕ್ಷೆ ನಡೆಸಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಪಂಜಾಬ್ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ.

 

ಕರುಣ್ ನಾಯರ್, ಕೆ ಗೌತಮ್ ಹಾಗೂ ಜೇಮ್ಸ್ ನೀಶನ್ ಬದಲು ಮಂದೀಪ್ ಸಿಂಗ್, ಹರ್ಪ್ರೀತ್ ಬ್ರಾರ್ ಹಾಗೂ ಕ್ರಿಸ್ ಜೋರ್ಡನ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೇರಿಕೊಂಡಿದ್ದಾರೆ. 

 

ಕಿಂಗ್ಸ್ ಇಲೆವೆನ್ ಪಂಜಾಬ್ ಆಡಿದ 4 ಪಂದ್ಯದಲ್ಲಿ 1 ಗೆಲುವು ಹಾಗೂ 3 ಸೋಲು ಕಂಡಿದೆ. ಕೇವಲ 2 ಅಂಕದೊಂದಿದೆ 7ನೇ ಸ್ಥಾನದಲ್ಲಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಕೂಡ 1 ಗೆಲುವು 3 ಸೋಲಿನ ಮೂಲಕ 2 ಅಂಕ ಸಂಪಾದಿಸಿ ಕೊನೆಯ ಸ್ಥಾನದಲ್ಲಿದೆ.