ಶಾರ್ಜಾ(ಅ.26): ಅಂಕಪಟ್ಟಿಯಲ್ಲಿ 4 ಮತ್ತು 5ನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕೆಕೆಆರ್ ಹಾಗೂ ಪಂಜಾಬ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಇದೀಗ ಗೆಲವಿನ ಅಲೆಯಲ್ಲಿದೆ. ಈ ಮೂಲಕ ಪ್ಲೇ ಆಫ್ ರೇಸ್ ಪೈಪೋಟಿ ಹೆಚ್ಚಾಗಿದೆ. ಕೆಕೆಆರ್ 11ರಲ್ಲಿ 6 ಗೆಲುವು ಹಾಗೂ 5 ಸೋಲು ಕಂಡಿದೆ. ಇತ್ತ ಪಂಜಾಬ್ ಕೂಡ 11ರಲ್ಲಿ 5 ಗೆಲುವು ಕಂಡಿದೆ.