ಅಬು ಧಾಬಿ(ಅ.01):  13ನೇ ಆವೃತ್ತಿ ಐಪಿಎಲ್ ಟೂರ್ನಿಯ 13ನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮುರುಗನ್ ಅಶ್ವಿನ್ ಬದಲು ಕನ್ನಡಿಗೆ ಕೆ ಗೌತಮ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.ಆದರೆ ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಕೆಎಲ್ ರಾಹುಲ್ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಕೂದಲೆಳೆಯುವ ಅಂತರದಲ್ಲಿ ಪಂದ್ಯ ಕಳೆದುಕೊಳ್ಳುತ್ತಿದೆ.  ಡೆಲ್ಲಿ ವಿರುದ್ಧ ಸೂಪರ್ ಓವರ್‌ನಲ್ಲಿ ಪಂದ್ಯ ಕೈಚೆಲ್ಲಿದರೆ, ರಾಜಸ್ಥಾನ ವಿರುದ್ಧ ಬೃಹತ್ ಮೊತ್ತ ಕಲೆ ಹಾಕಿ ವಿರೋಚಿತ ಸೋಲು ಕಂಡಿತ್ತು. 

ಇತ್ತ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಆಡಿದ 3 ಪಂದ್ಯದಲ್ಲಿ 1 ಗೆಲುವು ಸಾಧಿಸಿದ್ದರೆ, ಇನ್ನುಳಿದ 2 ಪಂದ್ಯದಲ್ಲಿ ಸೋಲು ಕಂಡಿದೆ.