ಅಬುಧಾಬಿ(ಸೆ.23): ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಟೂರ್ನಿಯ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ಇಲ್ಲಿನ ಶೇಖ್ ಝಾಯೆದ್ ಮೈದಾನದಲ್ಲಿ ರನ್‌ ಮಳೆ ಹರಿಯುವ ನಿರೀಕ್ಷೆಯಿದೆ. ಉಭಯ ತಂಡಗಳು ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದ್ದು, 13ನೇ ಆವೃತ್ತಿಯ ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆಯಲು ತುದಿಗಾಲಿನಲ್ಲಿ ನಿಂತಿವೆ.

ಕೆಕೆಆರ್ ತಂಡದಲ್ಲಿ ಸುನಿಲ್ ನರೈನ್, ರಸೆಲ್, ಇಯಾನ್ ಮಾರ್ಗನ್ ಹಾಗೂ ಪ್ಯಾಟ್ ಕಮಿನ್ಸ್ ಸ್ಥಾನ ಪಡೆದ ವಿದೇಶಿ ಆಟಗಾರರೆನಿಸಿದ್ದಾರೆ. ಇನ್ನು ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ತಂಡಗಳು ಹೀಗಿವೆ:

ಮುಂಬೈ ಇಂಡಿಯನ್ಸ್:

ಕೋಲ್ಕತ ನೈಟ್‌ ರೈಡರ್ಸ್: