ಅಬು ಧಾಬಿ(ಅ.16); ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಇದೀಗ ಹೊಸ ಪಯಣ ಆರಂಭಿಸಲು ಮುಂದಾಗಿದೆ. ಇತ್ತ ಮುಂಬೈ ಇಂಡಿಯನ್ಸ್ ಗೆಲುವಿನ ಅಭಿಯಾನ ಮುಂದುವರಿಸುವ ಲೆಕ್ಕಾಚಾರದಲ್ಲಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೆಕೆಆರ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಶಿವಂ ಮಾವಿ ಹಾಗೂ ಕ್ರಿಸ್ ಗ್ರೀನ್ ತಂಡ ಸೇರಿಕೊಂಡಿದ್ದಾರೆ. ಇನ್ನು ಮುಂಬೈ ತಂಡಕ್ಕೆ ನತನ್ ಕೌಲ್ಟರ್ ನೈಲ್ ತಂಡ ಸೇರಿಕೊಂಡಿದ್ದಾರೆ.

ಆರ್‌ಸಿಬಿ ವಿರುದ್ಧದ ಸೋಲಿನ ಬಳಿಕ ಕೆಕೆಆರ್ ನಾಯಕ ದಿನೇಶ್ ಕಾರ್ತಿಕ್ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಹೀಗಾಗಿ ಇಯಾನ್ ಮಾರ್ಗನ್‌ಗೆ ನಾಯಕತ್ವ ನೀಡಲಾಗಿದೆ. 7ರಲ್ಲಿ 4 ಗೆಲುವು ಹಾಗೂ 3 ಸೋಲು ಕಂಡಿರುವ ಕೆಕೆಆರ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಮುಂಬೈ ಇಂಡಿಯನ್ಸ್ 5 ಗೆಲುವಿನೊಂದಿಗೆ 2ನೇ ಸ್ಥಾನದಲ್ಲಿದೆ.