ಶಾರ್ಜಾ(ಅ.03): 13ನೇ ಆವೃತ್ತಿ ಐಪಿಎಲ್ ಟೂರ್ನಿಯ 16ನೇ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಕೆಕೆಆರ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಅಕ್ಸರ್ ಪಟೇಲ್ ಬದಲು ಆರ್ ಅಶ್ವಿನ್ ತಂಡ ಸೇರಿಕೊಂಡಿದ್ದಾರೆ. ಆಶ್ವಿನ್ ಇಂಜುರಿ ಕಾರಣ ತಂಡದಿಂದ ಹೊರಗುಳಿದಿದ್ದರು. ಇದೀಗ ಚೇತರಿಸಿಕೊಂಡಿದ್ದು, ಮತ್ತೆ ತಂಡಕ್ಕೆ ವಾಪಸ್ ಆಗಿದ್ದಾರೆ. ಇನ್ನು ಇಶಾಂತ್ ಶರ್ಮಾ ಬದಲು ಹರ್ಷಲ್ ಪಟೇಲ್ ತಂಡ ಸೇರಿಕೊಂಡಿದ್ದಾರೆ.

 

ಡೆಲ್ಲಿ ಹಾಗೂ ಕೋಲ್ಕತಾ ತಂಡಗಳು ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಕೆಕೆಆರ್ ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 37 ರನ್‌ಗಳ ಗೆಲುವು ಸಾಧಿಸಿತ್ತು. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 15 ರನ್ ಗೆಲುವು ಕಂಡಿತ್ತು. ಡೆಲ್ಲಿ 3 ಪಂದ್ಯದಲ್ಲಿ 2 ಗೆಲುವು ಸಾಧಿಸಿದ್ದರೆ, ಇತ್ತ ಕೆಕೆಆರ್ ಕೂಡ 3ರಲ್ಲಿ 2 ಗೆಲುವು ಹಾಗೂ 1 ಸೋಲು ಕಂಡಿದೆ.