Asianet Suvarna News Asianet Suvarna News

ಮತ್ತೊಮ್ಮೆ ಕಿಂಗ್ಸ್ XI ಪಂಜಾಬ್ ಗೆಲ್ಲಿಸುತ್ತಾರಾ ಕ್ರಿಸ್ ಗೇಲ್?

ಸೂಪರ್ ಸಂಡೇಯಲ್ಲಿನ ಎರಡನೇ ಪಂದ್ಯದಲ್ಲಿಂದು ಬಲಿಷ್ಠ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

 

IPL 2020 KXIP vs MI all eyes on Chris Gayle Performance kvn
Author
Dubai - United Arab Emirates, First Published Oct 18, 2020, 9:31 AM IST
  • Facebook
  • Twitter
  • Whatsapp

ದುಬೈ(ಅ.18): ಯೂನಿವರ್ಸೆಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಸೇರ್ಪಡೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಉತ್ಸಾಹ ಹೆಚ್ಚಿಸಿದ್ದು, ತಂಡ ಪ್ಲೇ ಆಫ್ ರೇಸಿನಲ್ಲಿ ಉಳಿದುಕೊಳ್ಳಬೇಕಿದ್ದರೆ ಭಾನುವಾರ ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

"

ಬಲಿಷ್ಠ ಮುಂಬೈ ಇಂಡಿಯನ್ಸ್ ಸತತ 5 ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡ ಎಲ್ಲಾ ವಿಭಾಗಗಳಲ್ಲೂ ಸಾಕಷ್ಟು ಬಲಿಷ್ಠವಾಗಿದ್ದು,  ಮುಂಬೈ ಇಂಡಿಯನ್ಸ್ ಪಡೆಯನ್ನು ಮಣಿಸುವುದು ಅಷ್ಟು ಸುಲಭದ ಮಾತಲ್ಲ. ಕಳೆದ ಪಂದ್ಯದಲ್ಲಿ ಕ್ವಿಂಟನ್ ಡಿಕಾಕ್ ಭರ್ಜರಿ ಬ್ಯಾಟಿಂಗ್ ನಡೆಸಿದ್ದರು. ಹೀಗಾಗಿ ಡಿಕಾಕ್ ಅವರನ್ನು ನಿಯಂತ್ರಿಸುವುದು ಪಂಜಾಬ್‌ಗೆ ಸವಾಲಾಗುವ ಸಾಧ್ಯತೆಯಿದೆ.

ಸನ್‌ರೈಸರ್ಸ್-ಕೆಕೆಆರ್‌ಗೆ ಹ್ಯಾಟ್ರಿಕ್ ಸೋಲಿನ ಭೀತಿ..!

ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಪರ ನಾಯಕ ಕೆ.ಎಲ್. ರಾಹುಲ್, ಮಯಾಂಕ್ ಅಗರ್‌ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್ ದೊಡ್ಡ ಇನಿಂಗ್ಸ್ ಕಟ್ಟಿದರೆ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಪ್ರಬಲ ಪೈಪೋಟಿ ನೀಡಬಹುದಾಗಿದೆ. ಮುಂಬೈ ವೇಗಿಗಳನ್ನು ಪಂಜಾಬ್ ತಂಡ ಹೇಗೆ ಎದುರಿಸಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಪಂದ್ಯ ಆರಂಭ: ಸಂಜೆ 7.30ಕ್ಕೆ
ಸ್ಥಳ: ದುಬೈ
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್

Follow Us:
Download App:
  • android
  • ios