ಶಾರ್ಜಾ(ಅ.04): 13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಪಯಣ ಹೆಚ್ಚು ಕಡಿಮೆ ಒಂದೇ ರೀತಿ ಇದೆ. ಅಂಕಪಟ್ಟಿಯಲ್ಲಿ ಮುಂಬೈ 3ನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 4ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವು ಉಭಯ ತಂಡಗಳಿಗೆ ಮುಖ್ಯವಾಗಿದೆ.

ಶಾರ್ಜಾದಲ್ಲಿಂದು ಹಾಲಿ ಚಾಂಪಿಯನ್ ಮುಂಬೈಗೆ ಹೈದರಾಬಾದ್ ಸವಾಲು..

ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡ ತಲಾ 4 ಅಂಕಗಳಿಸಿದೆ. ಆದರೆ ನೆಟ್‌ರನ್ ರೇಟ್ ಆಧಾರದಲ್ಲಿ ಮುಂಬೈ 3ನೇ ಸ್ಥಾನ ಅಲಂಕರಿಸಿದೆ. ಉಭಯ ತಂಡಗಳು ಗೆಲುವಿನ ಲಯದಲ್ಲಿದೆ. ಹೀಗಾಗಿ ಇಂದಿನ ಹೋರಾಟ ಮತ್ತಷ್ಟು ಕುತೂಹಲ ಕೆರಳಿಸುವುದರಲ್ಲಿ ಅನುಮಾನವಿಲ್ಲ. ಇಂದಿನ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆಗಳಾಗುವ ಸಾಧ್ಯತೆಗಳಿವೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬೌಲಿಂಗ್ ವೇಳೆ ಹೈದರಾಬಾದ್ ವೇಗಿ ಭುವನೇಶ್ವರ್ ಕುಮಾರ್ ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಮುಂಬೈ ವಿರುದ್ಧದ ಪಂದ್ಯಕ್ಕೆ ಭುವಿ ಲಭ್ಯವಾಗುವ ಸಾಧ್ಯತೆ ಕಡಿಮೆ. ಹೀಗಾಗಿ ಸಿದ್ದಾರ್ಥ್ ಕೌಲ್ ಹಾಗೂ ಸಂದೀಪ್ ಶರ್ಮಾ ನಡುವೆ ಪೈಪೋಟಿ ಇದೆ. ಭುವಿ ಅಲಭ್ಯತೆ ಹೈದರಾಬಾದ್ ಬೌಲಿಂಗ್ ವಿಭಾಗವನ್ನು ದುರ್ಬಲಗೊಳಿಸಲಿದೆ. ಹೀಗಾಗಿ ವಿದೇಶಿ ಆಟಗಾರರ ಸ್ಥಾನದಲ್ಲೂ ಬದಲಾವಣೆ ಮಾಡುವ ಸಾಧ್ಯತೆ ಹೆಚ್ಚಿದೆ.

ಹೈದರಾಬಾದ್ ಸಂಭವನೀಯ ಪ್ಲೇಯಿಂಗ್ 11
ಡೇವಿಡ್ ವಾರ್ನರ್ (c), ಜಾನಿ ಬೈರ್‌ಸ್ಟೋ (wk), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮಾದ್, ರಶೀದ್ ಖಾನ್, ಸಂದೀಪ್ ಶರ್ಮಾ, ಖಲೀಲ್ ಅಹಮ್ಮದ್, ಟಿ ನಟರಾಜನ್

ಮುಂಬೈ ಇಂಡಿಯನ್ಸ್ ತಂಡ ಬಹುತೇಕ ಸಮತೋಲನದಿಂದ ಕೂಡಿದೆ. ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿದೆ. ಆದರೆ ಕ್ವಿಂಟನ್ ಡಿಕಾಕ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಗೀಗಾಗಿ ಡಿಕಾಕ್ ಬದಲು ಕ್ರಿಸ್ ಲಿನ್ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಆದರೆ ಮ್ಯಾನೇಜ್ಮೆಂಟ್ ಡಿಕಾಕ್‌ಗೆ ಮತ್ತೊಂದು ಅವಕಾಶ ನೀಡಲು ಮುಂದಾಗಿದೆ.

ಮುಂಬೈ ಸಂಭವನೀಯ ಪ್ಲೇಯಿಂಗ್ 11
ರೋಹಿತ್ ಶರ್ಮಾ (c), ಕ್ರಿಸ್ ಲಿನ್ (wk), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿಸ್ಸನ್, ರಾಹುಲ್ ಚಹಾರ್, ಟ್ರೆಂಟ್ ಬೋಲ್ಟ್, ಜಸ್ಪ್ರೀತ್ ಬುಮ್ರಾ