13ನೇ ಆವೃತ್ತಿ ಐಪಿಎಲ್ ಟೂರ್ನಿಯ 20ನೇ ಲೀಗ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಅಬು ಧಾಬಿ(ಅ.06): ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ರೋಚಕ ಪಂದ್ಯಕ್ಕೆ ಅಬು ಧಾಬಿ ಕ್ರೀಡಾಂಗಣ ಸಜ್ಜಾಗಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ರಾಜಸ್ಥಾನ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ಕಾರ್ತಿಕ್ ತ್ಯಾಗಿ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಯಶಸ್ವಿ ಜೈಸ್ವಾಲ್, ಹಾಗೂ ಅಂಕಿತ್ ರಜಪೂತ್ ತಂಡ ಸೇರಿಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಆಡಿದ 5 ಪಂದ್ಯದಿಂದ 3 ಗೆಲುವು ಹಾಗೂ 2 ಸೋಲು ಅನುಭವಿಸೋ ಮೂಲಕ 6 ಅಂಕಗಳನ್ನು ಸಂಪಾದಿಸಿದೆ. ಇನ್ನು ರಾಜಸ್ತಾನ ರಾಯಲ್ಸ್ ಆಡಿದ 4 ಪಂದ್ಯದಲ್ಲಿ 2 ರಲ್ಲಿ ಗೆಲುವು 2ರಲ್ಲಿ ಸೋಲು ಕಂಡು 4 ಅಂಕ ಸಂಪಾದಿಸಿದೆ.
