ದುಬೈ(ಅ.18): ಬಲಿಷ್ಠ ಮುಂಬೈ ಇಂಡಿಯನ್ಸ್ ಹಾಗೂ ಇದೀಗ ಗೆಲುವಿನ ಹಳಿಗೆ ಮರಳಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಹೋರಾಟಕ್ಕೆ ವೇದಿಕೆ ರೆಡಿಯಾಗಿದೆ.  ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿದೆ.

ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 

 

ಮುಂಬೈ ಇಂಡಿಯನ್ಸ್ ಆಡಿದ 8ರಲ್ಲಿ 6 ಪಂದ್ಯ ಗೆದ್ದುಕೊಂಡಿದೆ. ಇನ್ನುಳಿದ 2 ಪಂದ್ಯದಲ್ಲಿ ಮುಗ್ಗರಿಸಿದೆ. ಇತ್ತ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆಡಿದ 8ರಲ್ಲಿ ಕೇವಲ 2 ಪಂದ್ಯದಲ್ಲಿ ಮಾತ್ರ ಗೆಲುವು ಕಾಣೋ ಮೂಲಕ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.