ಶಾರ್ಜಾ(ಅ.23):  ಮುಂಬೈ ಇಂಡಿಯನ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮುಗ್ಗರಿಸಿದೆ. ಈ ಮೂಲಕ ಚೆನ್ನೈ ಐಪಿಎಲ್ 2020 ಆವೃತ್ತಿಯಿಂದ ಹೊರಬಿದ್ದಿದೆ. ಇತ್ತ 10 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದ ಮುಂಬೈ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

ಗೆಲುವಿಗೆ 115 ರನ್ ಟಾರ್ಗೆಟ್ ಪಡೆದ ಮುಂಬೈ ಇಂಡಿಯನ್ಸ್ ಯಾವುದೇ ಆತಂಕವಿಲ್ಲದೆ ಗುರಿ ಚೇಸ್ ಮಾಡಿತು. ಕ್ವಿಂಟನ್ ಡಿಕಾಕ್ ಹಾಗೂ ಇಶಾನ್ ಕಿಶನ್ ಭರ್ಜರಿ ಆರಂಭ ನೀಡಿದರು. 13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಆರಂಭಿಕ ಬ್ಯಾಟ್ಸ್‌ಮನ್ ದಾಖಲೆ ಪ್ರದರ್ಶನ ನೀಡಿದರು.

ಸ್ಫೋಟಕ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶಾನ್ ಹಾಫ್ ಸೆಂಚುರಿ ಸಿಡಿಸಿದರು. ಕ್ವಿಂಟನ್ ಡಿಕಾಕ್ ಉತ್ತಮ ಸಾಥ್ ನೀಡಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ಯಾವುದೇ ವಿಕೆಟ್ ನಷ್ಟವಿಲ್ಲದೆ 12. 2 ಓವರ್‌ಗಳಲ್ಲಿ ಗೆಲುವು ಸಾಧಿಸಿತು. ಇಶಾನ್ ಕಿಶನ್ ಅಜೇಯ 68 ಹಾಗೂ ಡಿಕಾಕ್ 42 ರನ್ ಸಿಡಿಸಿದರು.   

ಭರ್ಜರಿ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತು. ಇಷ್ಟೇ ಅಲ್ಲ ಮುಂಬೈ ತಂಡದ ಪ್ಲೇ ಆಫ್ ಕನಸು ಬಹುತೇಕ ಸುಗಮವಾಗಿದೆ.