ಮುಂಬೈ ಇಂಡಿಯನ್ಸ್‌ಗೆ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳುವ ತವಕ, ಪ್ಲೇ ಆಫ್ ಆಸೆ ಜೀವಂತವಾಗಿರಿಸಲು ರಾಜಸ್ಥಾನ ರಾಯಲ್ಸ್ ಹೋರಾಟ. ಹೀಗಾಗಿ 46ನೇ ಲೀಗ್ ಪಂದ್ಯ ಮಹತ್ವ ಪಡೆದಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಅಬು ಧಾಬಿ(ಅ.25): 13ನೇ ಆವೃತ್ತಿ ಐಪಿಎಲ್ ಟೂರ್ನಿಯ 46ನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Scroll to load tweet…

ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲೂ ವಿಶ್ರಾಂತಿ ನೀಡಲಾಗಿದೆ. ಕೀರನ್ ಪೋಲಾರ್ಡ್ ನಾಯಕತ್ವದ ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ನತನ್ ಕೌಲ್ಟರ್ ನೈಲ್ ಬದಲು ಜೇಮ್ಸ್ ಪ್ಯಾಟಿನ್ಸನ್ ತಂಡ ಸೇರಿಕೊಂಡಿದ್ದಾರೆ.ಆದರೆ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಮುಂಬೈ ಇಂಡಿಯನ್ಸ್ 10ರಲ್ಲಿ 7 ಪಂದ್ಯ ಗೆದ್ದು 14 ಅಂಕಗಳನ್ನು ಸಂಪಾದಿಸಿದೆ. ಇತ್ತ ರಾಜಸ್ಥಾನ ರಾಯಲ್ಸ್ 11 ಪಂದ್ಯದಲ್ಲಿ ಕೇವಲ 4 ಗೆಲುವು ದಾಖಲಿಸಿದೆ. 


Scroll to load tweet…