ದುಬೈ(ಸೆ.28): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 10ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ತಂಡ ಆಯ್ದುಕೊಂಡಿದೆ.

ನಿರೀಕ್ಷೆಯಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಡೇಲ್ ಸ್ಟೇನ್ ಹಾಗೂ ಜೋಸ್ ಫಿಲಿಫ್‌ಗೆ ವಿಶ್ರಾಂತಿ ನೀಡಿ ಇಸುರು ಉಡನಾ ಹಾಗೂ ಆಡಂ ಜಂಪಾ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಉಮೇಶ್ ಯಾದವ್ ಬದಲಿಗೆ ಗುರು ಕೀರತ್ ಮನ್‌ಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸೌರಭ್ ತಿವಾರಿ ಬದಲಿಗೆ ಇಶನ್ ಕಿಶನ್ ತಂಡ ಕೂಡಿಕೊಂಡಿದ್ದಾರೆ.

ಧೋನಿಯಂತೆ ಬ್ಯಾಟಿಂಗ್ ಆರಂಭಿಸಿ ಯುವಿಯಂತೆ ಇನಿಂಗ್ಸ್ ಮುಗಿಸಿದ ರಾಹುಲ್ ತೆವಾಟಿಯಾ..!

ಈಗಾಗಲೇ ಉಭಯ ತಂಡಗಳು ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿದ್ದು, ತಲಾ ಒಂದು ಗೆಲುವು ಹಾಗೂ ಒಂದು ಸೋಲನ್ನು ಕಂಡಿವೆ. ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಸೋತು, ಕೆಕೆಆರ್ ವಿರುದ್ಧ ಗೆಲುವಿನ ಖಾತೆ ತೆರೆದಿತ್ತು. ಇನ್ನು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು, ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಮುಗ್ಗರಿಸಿತ್ತು.

 
ತಂಡಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಮುಂಬೈ ಇಂಡಿಯನ್ಸ್