ಶಾರ್ಜಾ(ಅ.09): 13ನೇ ಆವೃತ್ತಿ ಐಪಿಎಲ್ ಟೂರ್ನಿ 23ನೇ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಹೋರಾಟ ನಡೆಸಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ 2 ಬದಲಾವಣೆಯನ್ನೂ ಮಾಡಿದೆ.

ಅಂಕಿತ್ ರಜಪೂತ್ ಹಾಗೂ ಟಾಮ್ ಕುರನ್ ಬದಲು ಆ್ಯಂಡ್ರೂ ಟೈ ಹಾಗೂ ವರುಣ್ ಆ್ಯರೋನ್ ರಾಜಸ್ಥಾನ ರಾಯಲ್ಸ್ ತಂಡ ಸೇರಿಕೊಂಡಿದ್ದಾರೆ. ಇತ್ತ ಗೆಲುವಿನ ಅಲೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಡೆಲ್ಲಿ ಕ್ಯಾಪಿಟಲ್ಸ್ ಆಡಿದ 5 ಪಂದ್ಯದಲ್ಲಿ 4ರಲ್ಲಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. 5ರಲ್ಲಿ 2 ಗೆಲುವು ದಾಖಲಿಸಿರುವ ರಾಜಸ್ಥಾನ ರಾಯಲ್ಸ್ 7ನೇ ಸ್ಥಾನದಲ್ಲಿದೆ.