Asianet Suvarna News Asianet Suvarna News

IPL 2020: ಪಂಜಾಬ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ, ತಂಡದಲ್ಲಿ ಮಹತ್ವದ ಬದಲಾವಣೆ!

ಇದು ಪ್ಲೇ ಆಫ್ ಅವಕಾಶದ ಹೋರಾಟ. ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ರಾಜಸ್ಥಾನ ರಾಯಲ್ಸ್ ಮಹತ್ವದ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

IPL 2020 Rajasthan Royals opt to bowl against rajasthan Royals ckm
Author
Bengaluru, First Published Oct 30, 2020, 7:05 PM IST

ಅಬು ಧಾಬಿ(ಅ.30):  13ನೇ ಆವೃತ್ತಿ ಐಪಿಎಲ್ ಟೂರ್ನಿಯ 50ನೇ ಪಂದ್ಯ ಅತ್ಯಂತ ಮಹತ್ವದ ಪಡೆದುಕೊಂಡಿದೆ. ಕಾರಣ, ಗೆದ್ದ ತಂಡದ ಪ್ಲೇ ಆಫ್ ಆಸೆ ಜೀವಂತವಾಗಿದ್ದರೆ, ಸೋತ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

 

ರಾಜಸ್ಥಾನ ರಾಯಲ್ಸ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ವೇಗಿ ವರುಣ್ ಆರೋನ್ ತಂಡ ಸೇರಿಕೊಂಡಿದ್ದಾರೆ. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಯಾವುದೇ ಬದಲಾವಣೆ ಮಾಡಿಲ್ಲ.

ಸತತ 5 ಸೋತ ಬಳಿಕ ಫೀನಿಕ್ಸ್‌ನಂತೆ ಎದ್ದಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಸತತ 5 ಗೆಲುವು ದಾಖಲಿಸಿ ಇದೀಗ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇತ್ತ ರಾಜಸ್ಥಾನ ರಾಯಲ್ಸ್ 12ರಲ್ಲಿ 5 ಗೆಲುವು ಸಾಧಿಸಿ 10 ಅಂಕ ಸಂಪಾದಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

Follow Us:
Download App:
  • android
  • ios