ಅಬುಧಾಬಿ(ಅ.19): 9ರಲ್ಲಿ ತಲಾ 3 ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಇಲ್ಲಿ ಸೋಮವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಎದುರಾಗಲಿವೆ. 2 ತಂಡಗಳು ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಪ್ಲೇ ಆಫ್ ಹಂತ ಜೀವಂತ ಇರಲಿದೆ. ಉಭಯ ತಂಡಗಳಿಗೆ ಇದು ನಿರ್ಣಾಯಕ ಪಂದ್ಯ ಎನಿಸಿದೆ. ಸೋತ ತಂಡ ಬಹುತೇಕ ಟೂರ್ನಿಯಿಂದ ಹೊರ ಬೀಳಲಿದೆ. 

2ನೇ ಸೂಪರ್‌ ಓವರ್‌ನಲ್ಲಿ ರಾಹುಲ್-ಪೂರನ್ ಏಕೆ ಬರಲಿಲ್ಲ..? ಹೊಸ ರೂಲ್ಸ್‌ ನಿಮಗೆ ಗೊತ್ತಾ..?

ತಲಾ 6 ಅಂಕಗಳಿಂದ ಚೆನ್ನೈ, ರಾಜಸ್ಥಾನ ಪಟ್ಟಿಯಲ್ಲಿ ಕ್ರಮವಾಗಿ 6 ಮತ್ತು 7ನೇ ಸ್ಥಾನದಲ್ಲಿವೆ. ಕಳೆದ ಪಂದ್ಯದಲ್ಲಿ ಈ ಎರಡು ತಂಡಗಳು ಆಘಾತಕಾರಿಯಾದಂತಹ ಸೋಲು ಕಂಡಿದ್ದವು. ಅದರಲ್ಲಿ ರಾಜಸ್ಥಾನ ವಿರುದ್ಧ ಆರ್‌ಸಿಬಿ ಬ್ಯಾಟ್ಸ್‌ಮನ್ ಬಾರಿಸಿದ ಸಿಡಿಲಬ್ಬರದ ಅರ್ಧಶತಕ ಪಂದ್ಯ ದಿಕ್ಕನ್ನೇ ಬದಲಿಸಿ ಬಿಟ್ಟಿತ್ತು. ಇನ್ನು ಚೆನ್ನೈ ವಿರುದ್ಧ ಅಕ್ಷರ್ ಪಟೇಲ್ ಹಾಗೂ ಶಿಖರ್ ಧವನ್ ಬ್ಯಾಟಿಂಗ್ ಡೆಲ್ಲಿಗೆ ಮತ್ತೊಮ್ಮೆ ರೋಚಕ ಗೆಲುವು ತಂದಿಟ್ಟಿತ್ತು. 

ಪಿಚ್ ರಿಪೋರ್ಟ್: ಮೊದಲು ಬ್ಯಾಟ್ ಮಾಡುವ ತಂಡ 175ಕ್ಕಿಂತ ಹೆಚ್ಚಿನ ಮೊತ್ತ ಸೇರಿಸಬೇಕಿದೆ. ಟಾಸ್ ಪ್ರಮುಖ ಪಾತ್ರವಹಿಸಲಿದೆ.

ಸಂಭಾವ್ಯ ತಂಡ ಹೀಗಿವೆ:

ಚೆನ್ನೈ ಸೂಪರ್ ಕಿಂಗ್ಸ್: ಸ್ಯಾಮ್ ಕರ್ರನ್, ಫಾಫ್ ಡುಪ್ಲೆಸಿ, ಶೇನ್ ವಾಟ್ಸನ್, ಅಂಬಟಿ ರಾಯುಡು, ಎಂ.ಎಸ್. ಧೋನಿ (ನಾಯಕ), ರವೀಂದ್ರ ಜಡೇಜಾ, ಕೇದಾರ್ ಜಾಧವ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಕರಣ್ ಶರ್ಮಾ.

ರಾಜಸ್ಥಾನ ರಾಯಲ್ಸ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ (ನಾಯಕ), ಜೋಸ್ ಬಟ್ಲರ್, ರಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಜಯದೇವ್ ಉನಾದ್ಕತ್, ಕಾರ್ತಿಕ್ ತ್ಯಾಗಿ.

ಪಂದ್ಯ ಆರಂಭ: ಸಂಜೆ 7.30ಕ್ಕೆ
ಸ್ಥಳ: ಅಬುಧಾಬಿ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್