ಶಾರ್ಜಾ(ಸೆ.27):  ಐಪಿಎಲ್ ಲೀಗ್ ಟೂರ್ನಿಯ 9ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.  ರಾಜಸ್ಥಾನದಲ್ಲಿ ಡೇವಿಡ್ ಮಿಲ್ಲರ್ ಬದಲು ಅಂಕಿತ್ ರಜಪೂತ್ ತಂಡ ಸೇರಿಕೊಂಡಿದ್ದಾರೆ. ಇನ್ನು ಸ್ಫೋಟಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಕೂಡ ತಂಡ ಸೇರಿಕೊಂಡಿದ್ದಾರೆ.

 

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್ ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿದೆ. ಇನ್ನು ಡೆಲ್ಲಿ ವಿರುದ್ಧ ಸೂಪರ್ ಓವರ್ ಮೂಲಕ ಮೊದಲ ಪಂದ್ಯ ಕೈಚೆಲ್ಲಿದ ಪಂಜಾಬ್, 2ನೇ ಪಂದ್ಯದಲ್ಲಿ ಬೆಂಗಳೂರು ವಿರುದ್ಧ ಅಬ್ಬರಿಸಿ ಭರ್ಜರಿ ಗೆಲುವು ದಾಖಲಿಸಿತ್ತು. ಇತ್ತ ರಾಜಸ್ಥಾನ ರಾಯಲ್ಸ್, ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಅಂಕಪಟ್ಟಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ 2ನೇ ಸ್ಥಾನದಲ್ಲಿದ್ದರೆ, ಕೇವಲ ಒಂದು ಪಂದ್ಯ ಆಡಿ ಗೆಲುವು ಸಾಧಿಸಿರುವ ರಾಜಸ್ಥಾನ ರಾಯಲ್ಸ್ 4ನೇ ಸ್ಥಾನದಲ್ಲಿದೆ.