ಅಬು ಧಾಬಿ(ಅ.03): 13ನೇ ಆವೃತ್ತಿ ಐಪಿಎಲ್ ಲೀಗ್ ಟೂರ್ನಿಯ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಒಂದು ಬದಲಾವಣೆ ಮಾಡಿದೆ. ಅಂಕಿತ್ ರಜಪೂತ್ ಬದಲು ಮಹಿಪಾಲ್ ಲಮ್ರೊರ್ ತಂಡ ಸೇರಿಕೊಂಡಿದ್ದಾರೆ.

 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. 

 

ಆಡಿರುವ 3 ಪಂದ್ಯದಲ್ಲಿ 2 ಗೆಲುವು 1 ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇತ್ತ ರಾಜಸ್ಥಾನ ರಾಯಲ್ಸ್ 3ರಲ್ಲಿ 2 ಗೆಲುವು 1 ಸೋಲು ಕಾಣುವ ಮೂಲಕ 4 ಅಂಕ ಸಂಪಾದಿಸಿದೆ. ಆದರೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.