Asianet Suvarna News Asianet Suvarna News

ಆರ್‌ಸಿಬಿ ಎದುರು ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್ ಆಯ್ಕೆ

13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 33ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

IPL 2020 Rajasthan Royals won the toss and Elected to bat First Against RCB kvn
Author
Dubai - United Arab Emirates, First Published Oct 17, 2020, 3:04 PM IST

ದುಬೈ(ಅ.17): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

"

ನಿರೀಕ್ಷೆಯಂತೆಯೇ ರಾಜಸ್ಥಾನ ರಾಯಲ್ಸ್  ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ಗುರುಕೀರತ್ ಮನ್ ಹಾಗೂ ಶಹಬಾಜ್ ನದೀಮ್ ತಂಡ ಕೂಡಿಕೊಂಡಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಶಿವಂ ದುಬೆಗೆ ವಿಶ್ರಾಂತಿ ನೀಡಲಾಗಿದೆ.

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೂ 8 ಪಂದ್ಯಗಳನ್ನಾಡಿದ್ದು, ಈ ಪೈಕಿ 5 ಗೆಲುವು ಹಾಗೂ 3 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ 8 ಪಂದ್ಯಗಳನ್ನಾಡಿ 3 ಗೆಲುವು 5 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಪ್ಲೇ ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ತಂಡಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಜಸ್ಥಾನ ರಾಯಲ್ಸ್:

 

 

Follow Us:
Download App:
  • android
  • ios