ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಐಪಿಲ್ ಟೂರ್ನಿಯ 12ನೇ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ.
ದುಬೈ(ಸೆ.30): 13ನೇ ಆವೃತ್ತಿ ಐಪಿಎಲ್ ಲೀಗ್ ಟೂರ್ನಿಯಲ್ಲಿ ಬಲಿಷ್ಠ ತಂಡವಾಗಿ ಗುರಿತಿಸಿಕೊಂಡಿರುವ ರಾಜಸ್ಥಾನ ರಾಯಲ್ಸ್, ಕೆಕೆಆರ್ ವಿರುದ್ಧ ಟಾಸ್ ಗೆದ್ದುಕೊಂಡಿದೆ. ಟಾಸ್ ಗೆದ್ದ ನಾಯಕ ಸ್ಟೀವ್ ಸ್ಮಿತ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆಡಿದ 2 ಪಂದ್ಯದಲ್ಲಿ 2ರಲ್ಲೂ ಗೆಲುವು ಸಾಧಿಸಿರುವ ರಾಜಸ್ಥಾನ ರಾಯಲ್ಸ್ ಸದ್ಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇತ್ತ 2ರಲ್ಲಿ 1 ಗೆಲುವು ಸಾಧಿಸಿರುವ ಕೆಕೆಆರ್ 7ನೇ ಸ್ಥಾನದಲ್ಲಿದೆ. ಇದೀಗ ಈ ಪಂದ್ಯದ ಫಲಿತಾಂಶ ಮತ್ತೆ ಅಂಕಪಟ್ಟಿಯಲ್ಲಿ ಕೆಲ ಬದಲಾವಣೆ ತರಲಿದೆ.
