ಕೊರೋನಾ ಭೀತಿಯಿಂದಾಗಿ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ಸೆ.01): ಯುಎಇಯಲ್ಲಿ ಸೆ.19ರಿಂದ ಆರಂಭವಾಗಲಿರುವ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ಗೆ ವಿರಾಟ್‌ ಕೊಹ್ಲಿ ನೇತೃತ್ವದ ರಾಯಲ್‌ ಚಾಲೆಂಜ​ರ್ಸ್ ಬೆಂಗಳೂರು ಸವಾಲೊಡ್ಡುವ ಸಾಧ್ಯತೆ ಇದೆ ಎನ್ನಲಾಗಿದೆ. 

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಕೊರೋನಾ ಕಂಟಕ ಎದುರಾಗಿರುವ ಕಾರಣದಿಂದ ಉದ್ಘಾಟನಾ ಪಂದ್ಯದಲ್ಲಿ ಸಿಎಸ್‌ಕೆ ಬದಲು ಮುಂಬೈ ವಿರುದ್ಧ ಆರ್‌ಸಿಬಿ ಸೆಣಸಲಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಚೆನ್ನೈ ತಂಡದ ಇಬ್ಬರು ಆಟಗಾರರು ಸೇರಿದಂತೆ 13 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಎಲ್ಲರೂ ಐಸೋಲೇಶನ್‌ನಲ್ಲಿ ಇದ್ದಾರೆ.

ಐಪಿಎಲ್‌ಗೆ ಆರ್‌ಸಿಬಿ ಹೊಸ ಜೆರ್ಸಿ ಬಿಡುಗಡೆ

ದುಬೈ: ಸೆ.19ರಿಂದ ಆರಂಭವಾಗಲಿರುವ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಗಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡ ಹೊಸ ಜೆರ್ಸಿ ಅನಾವರಣ ಮಾಡಿದೆ. ಆರ್‌ಸಿಬಿ ಹೊಸ ಜೆರ್ಸಿಯನ್ನು ಸಾಮಾಜಿಕ ತಾಣಗಳಲ್ಲಿ ಸೋಮವಾರ ಬಿಡುಗಡೆ ಮಾಡಿದೆ. 

Scroll to load tweet…

ಸುರೇಶ್ ರೈನಾರಿಂದ ತೆರವಾದ ಸ್ಥಾನಕ್ಕೆ ಕರ್ನಾಟಕದ ಆಟಗಾರ ಆಯ್ಕೆ..?

ಈ ಹಿಂದಿನ ಜೆರ್ಸಿಯಲ್ಲಿ ಇರುವಂತೆ ಕಪ್ಪು ಮತ್ತು ಕೆಂಪು ಬಣ್ಣಗಳ ಮಿಶ್ರಣವಿದ್ದು, ಕಂಗೊಳಿಸುತ್ತಿದೆ. ನಾಯಕ ವಿರಾಟ್‌ ಕೊಹ್ಲಿ, ಎಬಿ ಡಿವಿಲಿಯರ್ಸ್‌, ಪಾರ್ಥೀವ್‌ ಪಟೇಲ್‌, ಉಮೇಶ್‌ ಯಾದವ್‌ ಮತ್ತು ಯಜುವೇಂದ್ರ ಚಹಲ್‌ ಹೊಸ ಜೆರ್ಸಿ ಧರಿಸಿರುವ ಫೋಟೋವನ್ನು ಜಾಲತಾಣಗಳಲ್ಲಿ ಪೋಸ್ಟ್‌ ಮಾಡಲಾಗಿದೆ.