ಬೆಂಗಳೂರು(ನ.01): ರಾಜ್ಯದಾದ್ಯಂತ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಕರ್ನಾಟಕದ ಏಕೀಕರಣದ ದಿನವಾದ ನವೆಂಬರ್ 01ನ್ನು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.

"

ಇನ್ನು ಐಪಿಎಲ್ ಟೂರ್ನಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಪ್ಲೇ ಆಫ್ ಹೊಸ್ತಿಲಲ್ಲಿದೆ. ಸದ್ಯ 13 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ಗೆಲುವು ಹಾಗೂ 6 ಸೋಲುಗಳೊಂದಿಗೆ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆ ಬರೆದ ದೇವದತ್ ಪಡಿಕ್ಕಲ್!

ಇದೀಗ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಕೋರಿದೆ. ಕನ್ನಡಿಗರಾದ ದೇವದತ್ ಪಡಿಕ್ಕಲ್, ನಾಯಕ ವಿರಾಟ್ ಕೊಹ್ಲಿ, ಶಹಬಾಜ್ ಅಹಮ್ಮದ್, ಡೇಲ್ ಸ್ಟೇನ್, ಎಬಿ ಡಿವಿಲಿಯರ್ಸ್, ಯುಜುವೇಂದ್ರ ಚಹಲ್, ಉಮೇಶ್ ಯಾದವ್, ಶಿವಂ ದುಬೆ ಕನ್ನಡದಲ್ಲೇ ಶುಭಕೋರಿದ್ದಾರೆ. ಈ ಮೂಲಕ ಆರ್‌ಸಿಬಿ ತಂಡ ಮತ್ತೊಮ್ಮೆ ಕನ್ನಡಿಗರ ಮನ ಗೆದ್ದಿದೆ.