ಶಾರ್ಜಾ(ಅ.12): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್ ನಡುವಿನ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 28ನೇ ಪಂದ್ಯದಲ್ಲಿಂದು ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಬಲಿಷ್ಠ ಕೋಲ್ಕತ ನೈಟ್‌ ರೈಡರ್ಸ್ ತಂಡವನ್ನು ಕಟ್ಟಿಹಾಕಲು ಇನ್ನೊಬ್ಬ ವೇಗಿಯನ್ನು ಆರ್‌ಸಿಬಿ ಇಂದು ಕಣಕ್ಕಿಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಗುರುಕೀರತ್ ಮನ್ ಬದಲಿಗೆ ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಂಡಿದ್ದಾರೆ. ಈ ಹಿಂದಿನ ಪಂದ್ಯದಲ್ಲಿ ಸಿರಾಜ್ ಮಾರಕ ಬೌಲಿಂಗ್ ದಾಳಿ ನಡೆಸಿ ಗಮನ ಸೆಳೆದಿದ್ದರು.

ಕೋಲ್ಕತ ನೈಟ್‌ ರೈಡರ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇಂಗ್ಲೆಂಡ್ ಯುವ ಬ್ಯಾಟ್ಸ್‌ಮನ್ ಟಾಮ್ ಬಾಂಟನ್ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಸುನಿಲ್ ನರೈನ್ ಬದಲಿಗೆ ಟಾಮ್ ಬಾಂಟನ್ ತಂಡ ಕೂಡಿಕೊಂಡಿದ್ದಾರೆ.

 
ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡಗಳು ತಲಾ 6 ಪಂದ್ಯಗಳನ್ನಾಡಿದ್ದು, 4 ಗೆಲುವು 2 ಸೋಲುಗಳೊಂದಿಗೆ 8 ಅಂಕ ಕಲೆಹಾಕಿವೆ. ರನ್‌ ರೇಟ್ ಆಧಾರದಲ್ಲಿ ಕೆಕೆಆರ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ವಿರಾಟ್ ಪಡೆ 4ನೇ ಸ್ಥಾನದಲ್ಲಿದೆ.

ಇದನ್ನೂ ನೋಡಿ | ಕಳೆದ ವಾರ ಆರ್‌ಸಿಬಿ ಆಟ ಹೀಗಿತ್ತು...

"

ತಂಡಗಳು ಹೀಗಿವೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು:

ಕೋಲ್ಕತ ನೈಟ್‌ ರೈಡರ್ಸ್: