ದುಬೈ(ಸೆ.24): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ಪಂಜಾಬ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಕ್ರಿಸ್ ಜೋರ್ಡನ್, ಕೆ. ಗೌತಮ್ ಬದಲಿಗೆ ಜೇಮ್ಸ್ ನೀಶಮ್ ಹಾಗೂ ಮುರುಗನ್ ಅಶ್ವಿನ್ ತಂಡ ಕೂಡಿಕೊಂಡಿದ್ದಾರೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಗೆಲುವಿನ ನಾಗಾಲೋಟ ಮುಂದುವರೆಸುವ ಲೆಕ್ಕಾಚಾರದಲ್ಲಿದೆ. ಇನ್ನು ಮೊದಲ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ್ದ ರಾಹುಲ್ ಪಡೆ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

ತಂಡಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು:

ಕಿಂಗ್ಸ್ ಇಲೆವನ್ ಪಂಜಾಬ್: