ಶಾರ್ಜಾ(ಅ.12): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 28ನೇ ಲೀಗ್ ಪಂದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡ ಗೆಲುವಿನ ಅಲೆಯಲ್ಲಿದೆ. ಇದೀಗ ಈ ತಂಡದ ಹೋರಾಟದಲ್ಲಿ ಗೆಲುವು ಯಾರಿಗೆ ಅನ್ನೋ ಲೆಕ್ಕಾಚಾರ ನಡೆಯುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

RCB ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಗುರುಕೀರತ್ ಸಿಂಗ್ ಮಾನ್ ಬದಲು, ವೇಗಿ ಮೊಹಮ್ಮದ್ ಸಿರಾಜ್ ತಂಡ ಸೇರಿಕೊಂಡಿದ್ದಾರೆ. ಕೆಕೆಆರ್ ತಂಡದಲ್ಲೂ ಬದಲಾವಣೆ ಮಾಡಲಾಗಿದೆ.ಕಳಪೆ ಫಾರ್ಮ್‌ನಲ್ಲಿದ್ದ ಸುನಿಲ್ ನರೈನ್ ಬದಲು ಟಾಮ್ ಬಂಟನ್ ತಂಡ ಸೇರಿಕೊಂಡಿದ್ದಾರೆ.

ಅಂಕಪಟ್ಟಿಯಲ್ಲಿ ಕೆಕೆಆರ್ 3 ಹಾಗೂ ಆರ್‌ಸಿಬಿ 4ನೇ ಸ್ಥಾನದಲ್ಲಿದೆ. ಕೆಕೆಆರ್ 6 ಪಂದ್ಯದಲ್ಲಿ 4 ಗೆಲುವು 2 ಸೋಲು ಕಂಡಿದೆ. ಆದರೆ ನೆಟ್ ರನ್‌ರೇಟ್ ಆಧಾರದಲ್ಲಿ 3ನೇ ಸ್ಥಾನದಲ್ಲಿದೆ. ಇತ್ತ ಆರ್‌ಸಿಬಿ ಕೂಡ 4 ಗೆಲುವು 2 ಸೋಲು ಕಂಡಿದೆ. 

"